ಕಲಬುರಗಿ | ಸ್ವಂತ ಕಟ್ಟಡವಿಲ್ಲದ ಅಂಗನವಾಡಿ; ಶಾಲೆಯ ಹಳೆಯ ಕೊಠಡಿಯೇ ಗತಿಯಾಯ್ತು

Date:

ಸ್ವಂತ ಕಟ್ಟಡವಿಲ್ಲದ ಅಂಗನವಾಡಿ, ಇವತ್ತೋ ನಾಳೆಯೋ ಬೀಳುವ ಹಂತದಲ್ಲಿರುವ ಹಳೆಯ ಕೊಠಡಿಯೊಂದರಲ್ಲಿ ಕಲಿಯುತ್ತಿರುವ ಪುಟ್ಟ ಮಕ್ಕಳು, ಮಳೆ ಬಂದರೆ ಸೋರುವ ಅಂಗನವಾಡಿ ಕೇಂದ್ರ, ಇಂತಹ ಪರಿಸ್ಥಿತಿಯಲ್ಲೇ ಪಾಠ ಮಾಡಬೇಕಾಗಿದ್ದು ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯ ಅನಿವಾರ್ಯ.

ಕಲಬುರಗಿ ದಕ್ಷಿಣ ಕ್ಷೇತ್ರದ ಹಾಡಿಗಿಲ ಆರತಿ ತಾಂಡಾದ ಅಂಗನವಾಡಿ ಕೇಂದ್ರ-1ರಲ್ಲಿ ಕಲಿಯುವ ಮಕ್ಕಳಿಗೆ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಪರದಾಡುವಂತಾಗಿದೆ, ಏನಾದರೂ ಅವಘಡ ಸಂಭವಿಸಿದರೆ ಮಕ್ಕಳ ಗತಿ ಏನಾಗುತ್ತಿತ್ತು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ನೂತನ ಅಂಗನವಾಡಿ ಕಟ್ಟಡ ನಿರ್ಮಿಸಿ ಮಕ್ಕಳ ಸುರಕ್ಷತೆ ಜತೆಗೆ ಸಮರ್ಪಕ ಸೌಲಭ್ಯ ಒದಗಿಸಬೇಕೆಂಬುದು ತಾಂಡಾ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಈದಿನ. ಕಾಮ್ ಜೊತೆ ಮಾತನಾಡಿ, “2011 ರಿಂದ ಈ ಅಂಗನವಾಡಿ ಕೇಂದ್ರದಲ್ಲಿ ನಾನು ಕಾರ್ಯನಿರ್ವಹಿಸುತ್ತಿರುವೆ, ಅಂದಿನಿಂದ ಸ್ವಂತ ಕಟದ ಇಲ್ಲದೆ ಬಾಡಿಗೆ ಮನೆಯಲ್ಲಿಯೇ ಅಂಗನವಾಡಿ ಕೇಂದ್ರ ನಡೆಸಿದ್ದೇನೆ. 2019-20ರಲ್ಲಿ ಸಿಡಿಪಿಐ ಅವರು ಪರಿಶೀಲನೆಗೆ ಬಂದಾಗ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಸುವುದು ಬೇಡ, ಸರಕಾರಿ ಶಾಲೆಯಲ್ಲಿ ಅಂಗನವಾಡಿ  ನಡೆಸುವಂತೆ ಸೂಚಿಸಿ ಸರ್ಕಾರಿ ಶಾಲೆಯಲ್ಲಿ ಅಂಗನವಾಡಿ ನಡೆಸುವಂತೆ ಶಿಕ್ಷಣ ಇಲಾಖೆಯಿಂದ ಅನುಮತಿ ಕೊಡಿಸಿ ಅನುವು ಮಾಡಿಕೊಟ್ಟಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಪೂರ್ಣ ಶಿಥಿಲಗೊಂಡ ಈ ಕೋಣೆ ಬೀಳುವ ಹಂತದಲ್ಲಿದೆ. ಮಳೆಗಾಲದಲ್ಲಿ ಪುಟ್ಟ ಮಕ್ಕಳಿಗೆ ಸುರಕ್ಷತೆಯಿಂದ ಕಾಪಾಡುವುದು ಸವಾಲಿನ ಕೆಲಸವಾಗಿದೆ. ಅಂಗನವಾಡಿ ರೇಷನ್‌ ಶೇಖರಣೆ ಸೇರಿದಂತೆ ಮಕ್ಕಳಿಗೆ ಕುಳಿತುಕೊಳ್ಳಲುಸ ಜಾಗದ ಕೊರೆತೆಯಿದೆ. ಈ ಬಗ್ಗೆ ಇಲಾಖೆಯ ಮೇಲಾಧಿಕಾರಿಗಳು, ಗ್ರಾಮ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಧಿಕೃತ ಚುನಾವಣಾ ಫಲಿತಾಂಶ ಪ್ರಕಟಿಸಿದ ಆಯೋಗ: ಯಾವ ರಾಜ್ಯಗಳಲ್ಲಿ ಯಾರಿಗೆ ಎಷ್ಟು ಸ್ಥಾನ?

ಅಂಗನವಾಡಿ ಸಹಾಯಕಿ ವಿಮಲಬಾಯಿ ಮಾತನಾಡಿ, “ಅಂಗನವಾಡಿಗೆ ಎಲ್ಲಾ ರೀತಿಯ ಸೌಲಭ್ಯವಿದ್ದರೆ ಮಾತ್ರ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಆಗಮಿಸುತ್ತಾರೆ. ಆದರೆ ಇಲ್ಲಿನ ಮಕ್ಕಳಿಗೆ ಕನಿಷ್ಠ ಸೌಲಭ್ಯವಿಲ್ಲ, ಕೂಡಲೇ ನಮಗೆ ಸ್ವಂತ ಅಂಗನವಾಡಿ ಕಟ್ಟಡ ನಿರ್ಮಿಸಿಕೊಡಬೇಕು” ಎಂದು ಮನವಿ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...