ಬೆಂಗಳೂರು | ವಿಜ್ಞಾನ ಸಂವಹನ ಶಿಬಿರದ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿಯ ರವೀಂದ್ರ ರುದ್ರವಾಡಿಗೆ ಪ್ರಥಮ ಸ್ಥಾನ

Date:

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಎರಡು ದಿನಗಳ ವಿಜ್ಞಾನ ಸಂವಹನ ಶಿಬಿರದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ, ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ನಂದಗೂರು ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ರವೀಂದ್ರ ರುದ್ರವಾಡಿ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಈ ಪ್ರಬಂಧ ಸ್ಪರ್ಧೆಯನ್ನು ‘ಜಾಗತಿಕ ತಾಪಮಾನ ಹೆಚ್ಚಳ’ ಎಂಬ ಪ್ರಸ್ತಾವನೆಯ ಮೇಲೆ ಆಯೋಜಿಸಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ಒಟ್ಟು 28 ಮಂದಿ ವಿಜ್ಞಾನ ಲೇಖಕರು ಹಾಗೂ ವಿಜ್ಞಾನ ಸಂವಹನಕಾರರು ಈ ಸ್ಪರ್ಧೆಯಲ್ಲಿ ಭಾಗವಹಿಸಿ, ತಮ್ಮ ವೈಜ್ಞಾನಿಕ ತಿಳುವಳಿಕೆ, ಬರವಣಿಗೆಯ ನೈಪುಣ್ಯ ಹಾಗೂ ಸಂವಹನ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಬಂಧಗಳನ್ನು ವಿಷಯದ ಸ್ಪಷ್ಟತೆ, ವೈಜ್ಞಾನಿಕ ತರ್ಕಬದ್ಧತೆ, ಮಾಹಿತಿಯ ಸಂಗ್ರಹ ಮತ್ತು ವಿಶ್ಲೇಷಣೆ, ಭಾಷಾ ಶೈಲಿ ಹಾಗೂ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಿಷಯ ಮಂಡಿಸಿದ ಸಾಮರ್ಥ್ಯದ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಯಿತು. ಈ ಎಲ್ಲ ಅಂಶಗಳಲ್ಲಿ ರವೀಂದ್ರ ರುದ್ರವಾಡಿ ಅವರ ಪ್ರಬಂಧ ವಿಶಿಷ್ಟವಾಗಿ ಮೆರೆದಿದ್ದು, ನ್ಯಾಯಮಂಡಳಿಯ ಮೆಚ್ಚುಗೆಗೆ ಪಾತ್ರವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1239414

ರವೀಂದ್ರ ರುದ್ರವಾಡಿ ಅವರು ವಿಜ್ಞಾನ ಲೇಖನ, ವಿಜ್ಞಾನ ಸಂವಹನ, ಶಿಕ್ಷಣ ಹಾಗೂ ವೈಚಾರಿಕ ಸಾಹಿತ್ಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರು. ಅವರು ನ್ಯಾಷನಲ್ ಬುಕ್ ಟ್ರಸ್ಟ್, ಕರ್ನಾಟಕ ಸಾಹಿತ್ಯ ಅಕಾಡೆಮಿ ಸೇರಿದಂತೆ ಹಲವು ಪ್ರತಿಷ್ಠಿತ ಸಂಸ್ಥೆಗಳ ಪ್ರಕಟಣೆಗಳಿಗೆ ತಮ್ಮ ಲೇಖನಗಳನ್ನು ನೀಡಿದ್ದಾರೆ. ವೈಜ್ಞಾನಿಕ ವಿಚಾರಗಳನ್ನು ಸರಳ, ಸಂವಹನಾತ್ಮಕ ಹಾಗೂ ಜನಪರವಾಗಿ ಮಂಡಿಸುವ ಅವರ ವಿಶೇಷ ಶೈಲಿಯೇ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಸ್ಥಾನ ತಂದುಕೊಟ್ಟಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಫೆ.1ರಿಂದ ಮುಂಡರಗಿಯಲ್ಲಿ ಗ್ರಾಮೀಣ ಕ್ರಿಕೆಟ್ ಟೂರ್ನಮೆಂಟ್: ತಂಡಗಳಿಗೆ ಆಹ್ವಾನ

ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರವೀಂದ್ರ ರುದ್ರವಾಡಿ ಅವರು, ವಿಜ್ಞಾನವನ್ನು ವಿದ್ಯಾರ್ಥಿಗಳು ಮತ್ತು ಸಮಾಜದ ಸಾಮಾನ್ಯ ಜನರ ಬಳಿಗೆ ತಲುಪಿಸುವ ದೃಷ್ಟಿಯಿಂದ ನಿರಂತರವಾಗಿ ಲೇಖನ, ಉಪನ್ಯಾಸ ಹಾಗೂ ಸಂವಹನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಅವರ ಈ ಸಾಧನೆ ಶಿಕ್ಷಣ ಮತ್ತು ವಿಜ್ಞಾನ ಸಂವಹನ ಕ್ಷೇತ್ರಕ್ಕೆ ಮತ್ತೊಂದು ಗೌರವ ತಂದುಕೊಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮಕ್ಕಾ ಮಸೀದಿಯಲ್ಲಿ ರಂಜಾನ್ ಇಫ್ತಾರ್ ಕೂಟ: ಸಾಮರಸ್ಯದ ಸಂದೇಶ

ಜೇವರ್ಗಿ ಪಟ್ಟಣದ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜಮಾತ್ ಇಸ್ಲಾಮಿ ಹಿಂದ್ ವತಿಯಿಂದ...

ಕಲಬುರಗಿ | ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಮಾ. 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ

ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯದ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ...

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...