ಕಲಬುರಗಿ ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ

Date:

ನಗರ ಜಿಲ್ಲಾ ಕೋರ್ಟ್ ಕಟ್ಟಡಗಳ ಸಂಕೀರ್ಣದಲ್ಲಿ ಬಾಂಬ್ ಇರಿಸಿರುವುದಾಗಿ ಇ-ಮೇಲ್ ಮೂಲಕ ಬಂದ ಬೆದರಿಕೆ ಹಿನ್ನೆಲೆಯಲ್ಲಿ ಮಂಗಳವಾರ ಪೊಲೀಸರು ಹಾಗೂ ಬಾಂಬ್ ತಪಾಸಣಾ ದಳಗಳು ಕಟ್ಟಡದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬೆಳಿಗ್ಗೆ 5.40ರ ಸುಮಾರಿಗೆ ಮೂರು ಪುಟಗಳ ಇ-ಮೇಲ್ ಬಂದಿದ್ದು, ಬೆಳಿಗ್ಗೆ 11.50ಕ್ಕೆ ನ್ಯಾಯಾಲಯ ಅಥವಾ ನ್ಯಾಯಾಧೀಶರ ಕೊಠಡಿಯಲ್ಲಿ ವಿಷಾನಿಲ ತುಂಬಿದ ಸೈನಾಡ್ ಆರ್‌ಡಿಎಕ್ಸ್ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಳಿಗ್ಗೆ 11 ಗಂಟೆಯೊಳಗೆ ನ್ಯಾಯಾಧೀಶರು ಹಾಗೂ ನಾಗರಿಕರನ್ನು ಸ್ಥಳಾಂತರಿಸುವಂತೆ ಇ-ಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ.

1557671

ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಕಟ್ಟಡದಲ್ಲಿದ್ದ ನ್ಯಾಯಾಧೀಶರು, ವಕೀಲರು, ನ್ಯಾಯಾಂಗ ಇಲಾಖೆ ಸಿಬ್ಬಂದಿ ಹಾಗೂ ಕಕ್ಷಿದಾರರನ್ನು ಹೊರಗೆ ಕಳುಹಿಸಿದರು. ಕೆಲಕಾಲ ನ್ಯಾಯಾಲಯ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ಭಾಗಗಳಿಂದ ವಿಚಾರಣೆಗೆ ಆಗಮಿಸಿದ್ದ ಕಕ್ಷಿದಾರರು ಹಾಗೂ ವಕೀಲರು ಗೊಂದಲಕ್ಕೆ ಒಳಗಾದರು. ಪೊಲೀಸರು ಕಟ್ಟಡವನ್ನು ಸಂಪೂರ್ಣವಾಗಿ ಭದ್ರತಾ ವಲಯದಲ್ಲಿ ತೆಗೆದುಕೊಂಡು ಪ್ರತಿಯೊಂದು ಕೋಣೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶೋಧ ನಡೆಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸ್ನೇಹಿತರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

ಇ-ಮೇಲ್ ಒಂದು ಮುಸ್ಲಿಂ ಹೆಸರಿನ ಐಡಿ ಮೂಲಕ ಕಳುಹಿಸಲ್ಪಟ್ಟಿರುವುದಾಗಿ ತಿಳಿದುಬಂದಿದೆ. ಸೈಬರ್ ಕ್ರೈಂ ವಿಭಾಗದ ಸಹಕಾರದೊಂದಿಗೆ ಪೊಲೀಸರು ಇ-ಮೇಲ್ ಮೂಲ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...