BREAKING | ಆಳಂದ ಮತದಾರರ ಹೆಸರು ಕೈಬಿಟ್ಟ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿ ಬಿ ಕೆ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚನೆ

Date:

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 6670 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಈ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ ಅಪರ ಪೊಲೀಸ್‌ ಮಹಾ ನಿರ್ದೇಶಕರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಬಿ ಕೆ ಸಿಂಗ್ ಅವರ ನೇತೃತ್ವದಲ್ಲಿ ಎಸ್‌ಐಟಿ(ವಿಶೇಷ ತನಿಖಾ ತಂಡ) ತಂಡ ರಚಿಸಿದೆ.

ವಿಶೇಷ ಏನಂದರೆ ಹಿರಿಯ ಐಪಿಎಸ್ ಅಧಿಕಾರಿ ಬಿ ಕೆ ಸಿಂಗ್ ಅವರ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚನೆಯಾಗುವ ಬಗ್ಗೆ ಈದಿನ ಡಾಟ್‌ ಕಾಂ ಈ ಮೊದಲೇ ವಿಶೇಷ ವರದಿ ಪ್ರಕಟಿಸಿತ್ತು.

ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ. ಸಿಂಗ್ ಅವರ ನೇತೃತ್ವದಲ್ಲಿ ರಚನೆಯಾದ ಈ ವಿಶೇಷ ತನಿಖಾ ತಂಡದಲ್ಲಿ ಸಿಐಡಿಯ ಸಿಸಿಡಿ ವಿಭಾಗದ ಪೊಲೀಸ್ ಅಧೀಕ್ಷಕ ಸೈದುಲು ಅದಾವತ್ ಮತ್ತು ಎಸ್‌ಇಡಿ ವಿಭಾಗದ ಪೊಲೀಸ್ ಅಧೀಕ್ಷಕ ಶುಭಾನ್ವಿತ ಅವರು ಸದಸ್ಯರಾಗಿದ್ದಾರೆ. ಎಸ್‌ಐಟಿ ತಂಡವು ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಆದೇಶ ಸಂಖ್ಯೆ ಎಚ್‌ಡಿ 194 ಸಿಒಡಿ 2025ರ ಅಡಿ ಈ ತಂಡಕ್ಕೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 2(ಯು)ರಡಿ ಪೊಲೀಸ್ ಠಾಣಾಧಿಕಾರ ನೀಡಲಾಗಿದ್ದು, ಕರ್ನಾಟಕ ರಾಜ್ಯದಾದ್ಯಂತ ವ್ಯಾಪ್ತಿಯೊಂದಿಗೆ ತನಿಖೆ ನಡೆಸಲು ಅಧಿಕಾರ ನೀಡಲಾಗಿದೆ. ತಂಡವು ಸಿಐಡಿ ಮತ್ತು ಸ್ಥಳೀಯ ಪೊಲೀಸ್ ಸಂಪನ್ಮೂಲಗಳನ್ನು ಬಳಸಿಕೊಂಡು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ, ಶೀಘ್ರವೇ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಬೇಕು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸುವ ಈ ತಂಡಕ್ಕೆ ಅಗತ್ಯ ಸಿಬ್ಬಂದಿ ಮತ್ತು ಸೌಲಭ್ಯಗಳನ್ನು ಒದಗಿಸುವಂತೆಯೂ ಸೂಚಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಿಎಸ್‌ಟಿ ದರ ಇಳಿಕೆ ಲಾಭ ಗ್ರಾಹಕರಿಗೆ ದೊರೆಯಲಿ!

ಈ ಪ್ರಕರಣದ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಗೆ ಧಕ್ಕೆಯಾಗಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದ್ದು, ರಾಜ್ಯದಾದ್ಯಂತ ಇದೇ ರೀತಿಯ ಅನಧಿಕೃತ ಕೃತ್ಯಗಳು ನಡೆದಿರುವ ಸಾಧ್ಯತೆಯನ್ನು ಪರಿಗಣಿಸಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ದೂರುದಾರರಾದ ಮಮತಾ ಕುಮಾರಿ ಅವರ ವಿಚಾರಣೆ ವರದಿಯ ಆಧಾರದಲ್ಲಿ ಪ್ರಾರಂಭವಾದ ತನಿಖೆಯು ಇದೀಗ ಎಸ್‌ಐಟಿಗೆ ವರ್ಗಾವಣೆಯಾಗಿದ್ದು, ಮತದಾರರ ಹಕ್ಕುಗಳ ರಕ್ಷಣೆ ಮತ್ತು ಚುನಾವಣಾ ವ್ಯವಸ್ಥೆಯ ನಂಬಿಕೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಅಂಬಿಕಾ ಅವರ ಸಹಿಯೊಂದಿಗೆ ಜಾರಿಯಾದ ಈ ಆದೇಶವು ರಾಜ್ಯಪಾಲರ ಹೆಸರಿನಲ್ಲಿ ನೀಡಲಾಗಿದೆ.

ಮಾಜಿ ಶಾಸಕ ಬಿ.ಆರ್. ಪಾಟೀಲ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನ ಆಧಾರದಲ್ಲಿ ಪ್ರಾರಂಭವಾದ ಈ ಪ್ರಕರಣವು, ಆಯೋಗದ ಪರಿಶೀಲನೆಯಲ್ಲಿ 6018 ಮತದಾರರ ಹೆಸರುಗಳನ್ನು ಕೈಬಿಡಲು ಸಲ್ಲಿಸಲಾದ ಅರ್ಜಿಗಳಲ್ಲಿ ಕೇವಲ 24 ಮಾತ್ರ ನಿಯಮಾನುಸಾರವಾಗಿದ್ದು, ಉಳಿದ 5994 ಅರ್ಜಿಗಳು ದುರುದ್ದೇಶಪೂರ್ವಕವಾಗಿ ವಿವಿಧ ಮೊಬೈಲ್ ಸಂಖ್ಯೆಗಳ ಮೂಲಕ ಸಲ್ಲಿಸಲಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಳಂದ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂಗಳಾದ 182, 419, 464 ಮತ್ತು 465ರ ಅಡಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 26/2023 ದಾಖಲಾಗಿದ್ದು, ಈಗ ರಾಜ್ಯದ ಇತರ ಠಾಣೆಗಳಲ್ಲಿ ಇದೇ ರೀತಿಯ ಪ್ರಕರಣಗಳ ಸಮಗ್ರ ತನಿಖೆಗೆ ಎಸ್‌ಐಟಿ ರಚನೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...