ಕಲಬುರಗಿ | ಕೆಇಎ ಪರೀಕ್ಷಾ ಅಕ್ರಮ ಪ್ರಕರಣ; ಇಬ್ಬರು ಪ್ರಾಂಶುಪಾಲರ ಬಂಧನ

Date:

ಕಳೆದ ಅಕ್ಟೋಬರ್‌ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್​ ಬಳಸಿ ಅಕ್ರಮವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರನ್ನು ಬುಧವಾರ ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಕಾಂತ್ ಬುರಕಲ್ ಹಾಗೂ ಅಫಜಲಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಸಣ್ಣ ಪೂಜಾರಿ ಬಂಧಿತರು.

ಚಂದ್ರಕಾಂತ ಅವರು ಅಫಜಲಪುರದ ರಾಯಲ್ ಪಬ್ಲಿಕ್ ಶಾಲೆಯ ಕೆಇಎ ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿದ್ದರು, ಅಧಿಕೃತ ಅಭ್ಯರ್ಥಿಗಳ ಬದಲು ಬೇರೆಯವರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದ್ದರು. ಬಸಣ್ಣ ಪೂಜಾರಿ ಕೆಇಎ ಪರೀಕ್ಷೆ ಕಸ್ಟೋಡಿಯನ್ ಆಗಿದ್ದರು. ಇಬ್ಬರು ಪ್ರಾಂಶುಪಾಲರು ಕೆಇಎ ಪರೀಕ್ಷಾ ಅಕ್ರಮಕ್ಕೆ ನೆರವಾಗುವ ಉದ್ದೇಶದಿಂದ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

ಆರೋಪಿಗಳು ನೀಡಿದ್ದ ಸುಳಿವಿನ ಮೇರೆಗೆ ಸಿಐಡಿ ಅಧಿಕಾರಿಗಳು ಇಬ್ಬರನ್ನು ತೀವ್ರ ವಿಚಾರಣೆ ನಡೆಸಿ ಕಳಿಸಿದ್ದರು. ಇದೀಗ ಬುಧವಾರ ಚಂದ್ರಕಾಂತ್ ಹಾಗೂ ಬಸಣ್ಣ ಪೂಜಾರಿ ಅವರನ್ನು ಬಂಧಿಸಿ ಕಲಬುರಗಿಯ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...