ಕಲಬುರಗಿ | ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಲು ಕೇಂದ್ರಕ್ಕೆ ಒತ್ತಾಯ

Date:

ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಡಿಸೆಂಬರ್ 28, ಗುರುವಾರದಂದು ಕಲಬುರಗಿಯ ಕನಕ ಭವನದಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಗುವುದು ಎಂದು ಕುರುಬ ಸಮಾಜದ ಅಧ್ಯಕ್ಷ ಬಸವರಾಜ್ ಹೊಸಳ್ಳಿ ಮತ್ತು ಕಾರ್ಯದರ್ಶಿ ಮಲ್ಲಿಕಾರ್ಜುನ್ ಪೂಜಾರಿ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರು ಪೀಠ ತಿಂತಣಿ ಹಾಗೂ ಚಿತ್ತಾಪುರ ತಾಲೂಕ ಗೊಂಡ ಕುರುಬ ಸಂಘ ಮತ್ತು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ.

ಪಟ್ಟಣದಲ್ಲಿ ಡಿ.26ರಂದು ಕನಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2004ರಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರವು ಕುಲಶಾಸ್ತ್ರ ವರದಿಯನ್ನು ಮೂರು ಬಾರಿ ಪೂರಕ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಬಿಜೆಪಿ ಸರ್ಕಾರದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ಅರ್ಜುನ್ ಮುಂಡ, ಭಗವಂತ ಖುಬಾ, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಉಮೇಶ್ ಜಾದವ್, ಬಿ.ಎಲ್. ಸಂತೋಷ ಅವರನ್ನು  ಪೂಜ್ಯ ಶ್ರೀಸಿದ್ದರಾಮನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಹಾಗೂ ಚಿಂಚೋಳಿ ಮತ್ತು ಬಸವಕಲ್ಯಾಣ ವಿಧಾನಸಭೆ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,  ಬಿಜೆಪಿ ಮುಖಂಡರು ಕೇಂದ್ರ ಸರ್ಕಾರದಲ್ಲಿ ಕುರುಬರ ಎಸ್‌ಟಿ ಬೇಡಿಕೆ ಈಡೇರಿಸುವ ಭರವಸೆ ನೀಡಿ ಚುನಾವಣೆಯಲ್ಲಿ ಲಾಭ ಪಡೆದಿದ್ದಾರೆ ಎಂದು ಅವರು ದೂರಿದ್ದಾರೆ.

2024ರ ಚುನಾವಣೆ ಹತ್ತಿರ ಬಂದರೂ ಕುರುಬರ ಎಸ್.ಟಿ ಬೇಡಿಕೆ ಈಡೇರದ ಕಾರಣ ಕೇಂದ್ರ ಸರ್ಕಾರವು ಕುರುಬರಿಗೆ ನಂಬಿಕೆ ದ್ರೋಹ ಮಾಡಿದೆ. ಕುರುಬರ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ಬೀದಿಗಿಳಿದು ಹೋರಾಟ ಮಾಡುವ ಅನಿವಾರ್ಯ ಬಂದಿದೆ. ಡಿಸೆಂಬರ್ 28ರಂದು ನಡೆಯುವ ಹೋರಾಟದಲ್ಲಿ ತಾಲೂಕಿನ ಕುರುಬ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ  ಮಾಜಿ ತಾಲೂಕಾಧ್ಯಕ್ಷ ಬಸವರಾಜ್ ಪೂಜಾರಿ ಮೊಗಲಾ, ಪ್ರಭು ಗಂಗಾಣಿ, ಯಲ್ಲಾಲಿಂಗ ಪೂಜಾರಿ, ಜಗನ್ನಾಥ್ ಪೂಜಾರಿ ಆಲೂರ್, ನಾಗೇಶ್, ಬೀರಲಿಂಗ ಪೂಜಾರಿ, ಭೋಜು ಶೇರಿ, ಸಂತೋಷ್ ಪೂಜಾರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...