ಕಲಬುರಗಿ | ಕೌಟುಂಬಿಕ ಕಲಹ: ಒನಕೆಯಿಂದ ಹೊಡೆದು ಪತ್ನಿಯನ್ನೇ ಕೊಲೆಗೈದ ಪತಿ

Date:

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಒನಕೆಯಿಂದ ಹೊಡೆದು ಪತ್ನಿಯನ್ನೇ ಕೊಲೆಗೈದ ಘಟನೆ ಗುರುವಾರ ತಡರಾತ್ರಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಅಲ್ಲಾಪುರ ಎಂಬ ಗ್ರಾಮದಲ್ಲಿ ನಡೆದಿದೆ.

ಕಾಶಮ್ಮಾ ಗುತ್ತೆದಾರ (60) ಕೊಲೆಯಾದ ಮಹಿಳೆ, ಪತಿ ಮಾರುತಿ ಗುತ್ತೆದಾರ 62) ಬಂದಿತ ಆರೋಪಿ. ಪತ್ನಿಯ ಮೇಲೆ‌ ಅನುಮಾನ ಪಡುತ್ತಿದ್ದ ಪತಿ ಮಾರುತಿ ರಾತ್ರಿ ಮಲಗಿದ್ದ ವೇಳೆ ಒನಕೆಯಿಂದ ತಲೆಗೆ ಹೊಡೆದಿದ್ದಾನೆ. ಪತ್ನಿ ಕಾಶಮ್ಮಾ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಹತ್ಯೆಗೈದ ಆರೋಪಿ ಪ್ರತಿನಿತ್ಯ ಕುಡಿದು ಬಂದು ಜಗಳ ಮಾಡುತ್ತಿದ್ದನು.  ಕೊಲೆಯಾದ ಮಹಿಳೆಯ ಪುತ್ರ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ರಟಕಲ್‌ ಪೊಲೀಸ್‌ ಠಾಣೆ ಪಿಎಸ್‌ಐ ಪುಷ್ಪಾ ಈದಿನ.ಕಾಮ್‌ ದೊಂದಿಗೆ ಮಾತನಾಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...