ಕಲಬುರಗಿ | ಎಸ್‌ಸಿ/ಎಸ್‌ಟಿ ಗುತ್ತಿಗೆ ಮೀಸಲಾತಿ 2 ಕೋಟಿ ರೂ.ಗೆ ಹೆಚ್ಚಿಸಿ: ಮಹಾದೇವ ಸ್ವಾಮಿ

Date:

ರಾಜ್ಯ ಸರಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ 1ಕೋಟಿ ರೂ.ವರೆಗೆ ಮೀಸಲಾತಿ ಘೋಷಿಸಿದ್ದು, ಮೀಸಲಾತಿ ಮಿತಿಯನ್ನು  2ಕೋಟಿಗೆ ಹೆಚ್ಚಿಸಬೇಕೆಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಮಹಾದೇವಸ್ವಾಮಿ ಆಗ್ರಹಿಸಿದರು.

ಕಲಬುರಗಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ಆರ್ಥಿಕವಾಗಿ ಅತ್ಯಂತ ಸಂಕಷ್ಟ ಎದುರಿಸುತ್ತಿರುವ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಮೀಸಲಾತಿ ಕಲ್ಪಿಸಬೇಕೆಂಬ ನೈಜ ಕಳಕಳಿವಿದ್ದರೆ ಗುತ್ತಿಗೆದಾರರಿಗೆ ಮೀಸಲಾತಿ ಮಿತಿ 2ಕೋಟಿಗೆ ಹೆಚ್ಚಳ ಮಾಡಬೇಕೆಂದು” ಒತ್ತಾಯಿಸಿದರು.

“2013ರಲ್ಲಿ ಎಸ್ ಸಿ-ಎಸ್ ಟಿ ಗುತ್ತಿಗೆದಾರರಿಗೆ 50 ಲಕ್ಷದವರೆಗೆ ಮೀಸಲಾತಿ ಘೋಷಿಸಿ 2017ರಲ್ಲಿ ಜಾರಿಗೆ ತರಲಾಯಿತು. ನಂತರ ಗುತ್ತಿಗೆ ಮೀಸಲಾತಿಯನ್ನು 1ಕೋಟಿಗೆ ಹೆಚ್ಚಳ ಮಾಡುವುದಾಗಿ 2018ರಲ್ಲಿ ಘೋಷಿಸಿ ಅದನ್ನು 2023ರಲ್ಲಿ ಜಾರಿಗೆ ತರಲಾಗಿದೆ. ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಗುತ್ತಿಗೆದಾರರನ್ನು ನೆನಪಿಸಿಕೊಳ್ಳುವ ತಂತ್ರಗಾರಿಕೆ ಬಿಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘೋಷಣೆಗಳು ಕೇವಲ ಕಾಗದದ ಮೇಲಿದ್ದರೆ ಸಾಲದು. ಅದನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸುವ ನೈತಿಕ ಜವಾಬ್ದಾರಿಯನ್ನು ಸರಕಾರ ನಿಭಾಯಿಸಬೇಕು. ಒಂದೆಡೆ, ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಿ, ಮತ್ತೊಂದೆಡೆ ಕಾಮಗಾರಿಗಳಲ್ಲಿ ಪ್ಯಾಕೇಜ್ ಮಾಡಲಾಗುತ್ತಿದೆ. ಹೀಗಾದರೆ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರಿಗೆ ಮೀಸಲಾತಿಯ ಲಾಭ ಹೇಗೆ ಲಭಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಗನವಾಡಿಗಿಲ್ಲ ಸ್ವಂತ ಕಟ್ಟಡ; ಬಯಲು ರಂಗಮಂದಿರದ ಕೊಠಡಿಯೇ ಗತಿ

ಈ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ ಗುತ್ತಿಗೆದಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಜೈಕುಮಾರ್ ದೇಗಾಂವಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...