ಕಲಬುರಗಿ | ಬರ ಅಧ್ಯಯನ ನಡೆಸಿದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ

Date:

ಕಲಬುರಗಿ ಜಿಲ್ಲೆಯ ಸೇಡಂ‌ ತಾಲೂಕಿನಲ್ಲಿ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ರೈತರ ಜಮೀನುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ.

ಸೇಡಂ ತಾಲೂಕಿನ ಕೊಡ್ಲಾ, ಸೇಡಂ, ಮೊತಕಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದ ಜೆಡಿಎಸ್‌ ಮುಖಂಡರು ಮಳೆ ಕೊರತೆಯಿಂದ ಹಾಳಾದ ತೊಗರಿ ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿ, ರೈತರೊಂದಿಗೆ ಚರ್ಚಿಸಿದ್ದಾರೆ.

ಬೆಳೆ ವೀಕ್ಷಣೆ ನಡೆಸಿ ಮಾತನಾಡಿದ ಬಾಲರಾಜ್ ಗುತ್ತೇದಾರ, “ಮಳೆಯ ಕೊರತೆಯಿಂದಾಗಿ ಬಹುತೇಕ ರೈತರು ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಮಾಡಿದ ಬೆಳೆ ಚನ್ನಾಗಿ ಮೊಳಕೆ ಬಂದಿದೆಯಾದರು ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಫಲಕ್ಕೆ ಬರಬೇಕಾದ ಬೆಳೆ ಕೈಕೊಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಈಗಾಗಲೇ ಸೇಡಂ ಮತಕ್ಷೇತ್ರದ ರೈತರೊಂದಿಗೆ ಚರ್ಚಿಸಿದೆನೆ . ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಬಹುತೇಕ ರೈತರು ದುಃಖ ವ್ಯಕ್ತಪಡಿಸಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಳೆ ವಿಮೆ ಕೂಡ ಸರಿಯಾಗಿ ತಲುಪುತ್ತಿಲ್ಲ‌. ಎಲ್ಲಾ ರೀತಿಯಿಂದಲೂ ರೈತರು ಸಂಕಷ್ಟದಲ್ಲಿದ್ದೇವೆ. ಸರ್ಕಾರದ ನೆರವು ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಾಲರಾಜ್ ಗುತ್ತೇದಾರ ಹೇಳಿದರು.

ರೈತರೊಂದಿಗೆ ಸಂವಾದ ನಡೆಸಿ ಬರ ಅಧ್ಯಯನದ ವೇಳೆಯಲ್ಲಿ ವಿವಿಧೆಡೆ ರೈತರ ಹೊಲಗಳಿಗೆ ತೆರಳಿ ರೈತರೊಂದಿಗೆ ಸಂವಾದ ನಡೆಸಿದರು. ರೈತರು ಎದುರಿಸುತ್ತಿರುವ ಸಮಸ್ಯೆಗಳು, ಅವರ ಬೆಳೆಗಳ ಸ್ಥಿತಿಗತಿಯ ಬಗ್ಗೆ ರೈತರಿಂದಲೇ ಮಾಹಿತಿ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...