ಕಲಬುರಗಿ | ಮಹಿಳೆಯರ ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕೆ ಬಲಿಷ್ಠ ಮಹಿಳಾ ಆಂದೋಲನ ಅಗತ್ಯ: ಗುಂಡಮ್ಮ ಮಡಿವಾಳ್

Date:

ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಬಲಿಷ್ಠ ಮಹಿಳಾ ಆಂದೋಲನ ಅಗತ್ಯವಿದೆ ಎಂದು ಎಐಎಂಎಸ್ಎಸ್ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಗುಂಡಮ್ಮ ಮಡಿವಾಳ್ ಹೇಳಿದರು.

ನಗರದ ಎಸ್‌ಪಿ ವೃತ್ತದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸಂಘಟನೆಯಿಂದ ಆಯೋಜಿಸಲಾದ ಪ್ರತಿಭಟನಾ ಸಭೆ, ಪುಸ್ತಕ ಮಾರಾಟ ಹಾಗೂ ಸಹಿ ಸಂಗ್ರಹಣಾ ಅಭಿಯಾನವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ದೇಶದಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳನ್ನು ಕೊನೆಗೊಳಿಸಲು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಶ್ರಮಿಸುತ್ತಿದೆ. ಬಾಲ್ಯ ವಿವಾಹ, ಸ್ತ್ರೀ ಭ್ರೂಣ ಹತ್ಯೆ, ವರದಕ್ಷಿಣೆ ಕೊಲೆ, ಲಿಂಗ ತಾರತಮ್ಯ, ಮರ್ಯಾದಾಗೇಡು ಹತ್ಯೆ, ಅಪೌಷ್ಟಿಕತೆ, ಅಭದ್ರತೆ ಮತ್ತು ಕೌಟುಂಬಿಕ ದೌರ್ಜನ್ಯದಂತಹ ಹಲವಾರು ಜ್ವಲಂತ ಸಮಸ್ಯೆಗಳ ವಿರುದ್ಧ ಮಹಿಳೆಯರನ್ನು ಸಂಘಟಿಸಿ ಹೋರಾಟ ನಡೆಸುತ್ತಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1583871

‘ಕರ್ನಾಟಕದಲ್ಲಿಯೂ ಇದೇ ಉದ್ದೇಶದಿಂದ ವಿವಿಧ ಹೋರಾಟಗಳನ್ನು ನಡೆಸಲಾಗುತ್ತಿದ್ದು, 2025ರ ನವೆಂಬರ್ 25ರಿಂದ 2026ರ ಮಾರ್ಚ್ 23ರವರೆಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ರಾಜ್ಯವ್ಯಾಪಿ ಸಹಿ ಸಂಗ್ರಹಣಾ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಮಹಿಳೆಯರು ಇಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಗಮನಾರ್ಹ ಸಾಧನೆ ಮಾಡುತ್ತಿದ್ದರೂ ಸಮಾಜದ ದೃಷ್ಟಿಕೋನ ಇನ್ನೂ ಸಂಪೂರ್ಣವಾಗಿ ಪ್ರಜಾತಾಂತ್ರಿಕವಾಗಿಲ್ಲ. ಅಶ್ಲೀಲ ಸಿನಿಮಾ, ಸಾಹಿತ್ಯ, ಜಾಹೀರಾತುಗಳು, ಪೋರ್ನ್ ವೆಬ್‌ಸೈಟ್‌ಗಳು ಹಾಗೂ ಮದ್ಯ–ಮಾದಕ ವಸ್ತುಗಳ ಹಾವಳಿಯಿಂದ ಸಾಮಾಜಿಕ ವಾತಾವರಣ ಕಲುಷಿತಗೊಂಡು ಮಹಿಳೆಯರ ಜೀವ ಮತ್ತು ಜೀವನದ ಮೇಲೆ ನಿರಂತರ ದಾಳಿಗಳು ಹೆಚ್ಚುತ್ತಿವೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಗುಂಪು ಅತ್ಯಾಚಾರ, ಕೊಲೆ, ಮರ್ಯಾದಾಗೇಡು ಹತ್ಯೆ, ಆಸಿಡ್ ದಾಳಿ ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. 2023ರಲ್ಲಿ 600, 2024ರಲ್ಲಿ 739 ಹಾಗೂ 2025ರ ಜುಲೈವರೆಗೆ 547 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಾಲ್ಕು ತಿಂಗಳಲ್ಲಿ 979 ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ’ ಎಂದು ಅವರು ತಿಳಿಸಿದರು.

1583872

‘ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ಕೂಡ ಆತಂಕಕಾರಿಯಾಗಿ ಹೆಚ್ಚುತ್ತಿವೆ. ಆರ್‌ಸಿಎಚ್ ಪೋರ್ಟಲ್ ಅಂಕಿಅಂಶಗಳ ಪ್ರಕಾರ 2023–24ರ ಜುಲೈವರೆಗೆ ರಾಜ್ಯದಲ್ಲಿ 80,813 ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ವರದಿಯಾಗಿವೆ’ ಎಂದು ಹೇಳಿದರು.

‘ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಡಾ. ಸೀಮಾ ದೇಶಪಾಂಡೆ ಮಾತನಾಡಿ, ಈ 21ನೇ ಶತಮಾನದಲ್ಲಿಯೂ ಅನೇಕ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶಗಳು ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವ ಯೋಜನೆ ಹೆಣ್ಣುಮಕ್ಕಳ ಶಿಕ್ಷಣಕ್ಕೆ ದೊಡ್ಡ ಹೊಡೆತವಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ಸರ್ಕಾರವನ್ನು ಒತ್ತಾಯಿಸಿ ಸಹಿ ಸಂಗ್ರಹಣಾ ಅಭಿಯಾನ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಹಿಳಾ ದಿನದ ವಿಶೇಷ | ಗ್ರಾಮೀಣ ಆರ್ಥಿಕತೆ: ಹೈನುಗಾರಿಕೆಯಲ್ಲಿ ಮಹಿಳಾ ಸಬಲೀಕರಣದ ಕಥೆ

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ನಾಯಕಿಯರಾದ ವಿಶಾಲಾಕ್ಷಿ ಪಾಟೀಲ್, ಮಹಾದೇವಿ ಮಾನೆ, ರಾಧಾ ಜಿ., ಜಯಶ್ರೀ, ಭಾರತಿ, ರೂಪಾವತಿ, ರಾಧಿಕಾ, ಮಹಾದೇವಿ ಆತನೂರ, ಮಹಾದೇವಿ ಜಮಾದರ್, ಶರಣಮ್ಮ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...