ಕಲಬುರಗಿ | ಲಾರಿ-ಬೈಕ್‌ ನಡುವೆ ಅಪಘಾತ; ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಐವರು ದುರ್ಮರಣ

Date:

ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಬಳ್ಳೂರಿಗಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಸ್ಥಳದಲ್ಲಿಯೇ ಐವರು ಮೃತಪಟ್ಟಿದ್ದಾರೆ. ಅವರೆಲ್ಲರೂ ಬೆಂಗಳೂರು ಮೂಲದವರು ಎಂದು ಹೇಳಲಾಗಿದೆ.

ಅಪಘಾತ ಸ್ಥಳದಲ್ಲಿ ಮೃತರ ಆಧಾರ್ ಕಾರ್ಡ್‌ ಸಿಕ್ಕಿದೆ. ಅದರಲ್ಲಿ ಅವರೆಲ್ಲರ ವಿಳಾಸ ಬೆಂಗಳೂರು ಎಂದು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾರಾಷ್ಟ್ರದ ದುಧನಿ ಕಡೆಯಿಂದ ಅಫಜಲಪುರದ ಕಡೆಗೆ ದಂಪತಿ, ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಇದೇ ವೇಳೆ, ಅಫಜಲಪುರದಿಂದ ದುಧನಿಯತ್ತ ತೆರಳುತ್ತಿದ್ದ ಲಾರಿಯೊಂದು ಎದುರಿನಿಂದ ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕ ಲಾರಿಯನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...