ಕಲಬುರಗಿ | ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಲು ಎಐಡಿಎಸ್‌ಒ ಆಗ್ರಹ

Date:

ಸೇಡಂ ಪಟ್ಟಣ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಒತ್ತಾಯಿಸಿ ಎಐಡಿಎಸ್‌ಒ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ತಹಸೀಲ್ದಾರ್ ಮುಖಾಂತರ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆ ಉದ್ದೇಶಿಸಿ ಸ್ನೇಹಾ ಕಟ್ಟಿಮನಿ ಮಾತನಾಡಿ, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ, ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ.

ಘನ ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಎಐಡಿಎಸ್‌ಒ ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರವನ್ನು ವಿನಂತಿಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸ್ನೇಹಾ ಕಟ್ಟಿಮನಿ, ಗೋವಿಂದ ಯಳವಾರ, ಕಾಲೇಜು ವಿದ್ಯಾರ್ಥಿಗಳು ಮುನಿಪ್ಪ, ಚಂದ್ರಕಲಾ, ಭಾಗ್ಯ, ಕೀರ್ತಿ, ಕಾವೇರಿ ಸೇರಿ 800ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...