ಕಲಬುರಗಿ | ಬ್ರಹ್ಮಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್‌ಒ ಪ್ರತಿಭಟನೆ

Date:

ಕಲಬುರಗಿ ನಗರದ ಬ್ರಹ್ಮಪೂರ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸಿ ಮುಚ್ಚುವ ಕ್ರಮ ಖಂಡಿಸಿ, ಇಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದರು.

ಕಲಬುರಗಿಯ ತಿಮ್ಮಾಪುರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ನವೋದಯ ಹಾಗೂ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕರ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿತ್ತಾ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರವು “ಕೆಪಿಎಸ್ ಮ್ಯಾಗ್ನೆಟ್ ಶಾಲೆ” ಎಂಬ ಹೆಸರಿನಲ್ಲಿ ರಾಜ್ಯದ 40, ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದು, ಅದರ ಭಾಗವಾಗಿ ಸರ್ಕಾರಿ ಎಂ.ಪಿ.ಎಸ್ ಜೇವರ್ಗಿ ಕಾಲೋನಿ ರಸ್ತೆ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯಾಗಿ ಗುರುತಿಸಿ, ಬ್ರಹ್ಮಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಸಂಪೂರ್ಣವಾಗಿ ಮುಚ್ಚಲು ಮುಂದಾಗಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ವಿರೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಒ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್ ಕೆ ಮಾತನಾಡಿ, ‘ಗುಣಮಟ್ಟ ಹಾಗೂ ಮಾದರಿ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಹಂತಹಂತವಾಗಿ ಮುಚ್ಚುವ ಸರ್ಕಾರದ ನೀತಿ ಉಚಿತ ಮತ್ತು ಸಾರ್ವತ್ರಿಕ ಶಿಕ್ಷಣದ ಆಶಯಗಳಿಗೆ ವಿರುದ್ಧವಾಗಿದೆ. 6-7 ಕಿಲೋಮೀಟರ್ ದೂರದ ಶಾಲೆಗಳಿಗೆ ಬಡ ಮಕ್ಕಳನ್ನು ಕಳುಹಿಸುವುದು ಅಸಾಧ್ಯವಾಗಿದ್ದು, ಇದರಿಂದ ಅನೇಕ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದರು.

876695

‘ಈ ಯೋಜನೆಗಾಗಿ ಸರ್ಕಾರವು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕಿನಿಂದ ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದಿದ್ದು, ಕಾರ್ಪೊರೇಟ್ ಹಿತಾಸಕ್ತಿಗಾಗಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. “ಸರ್ಕಾರಿ ಶಾಲೆಗಳು ಮುಚ್ಚುವುದಿಲ್ಲ ಎಂಬ ಸಚಿವರ ಹೇಳಿಕೆಗಳು ಕೇವಲ ಜನರನ್ನು ದಾರಿ ತಪ್ಪಿಸುವಂತಿವೆ. ಒಂದೇ ಒಂದು ಸರ್ಕಾರಿ ಶಾಲೆಯೂ ಮುಚ್ಚದಂತೆ ಲಿಖಿತ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

ಇದೇ ವೇಳೆ ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಮಾತನಾಡಿ, ‘ಉಚಿತ ಸಾರಿಗೆ ವ್ಯವಸ್ಥೆಯ ಜವಾಬ್ದಾರಿಯನ್ನು ಪೋಷಕರು ಹಾಗೂ ಎಸ್‌ಡಿಎಂಸಿ ಮೇಲೆ ಹಾಕಿರುವುದು ಅನ್ಯಾಯವಾಗಿದ್ದು, ಪ್ರತಿಯೊಂದು ಶಾಲೆ ತನ್ನ ಆದಾಯದ ಮೂಲವನ್ನು ತಾವೇ ಹುಡುಕಿಕೊಳ್ಳಬೇಕೆಂಬ ನಿಲುವು ಉಚಿತ ಶಿಕ್ಷಣದ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದೆ’ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷ ಗೋವಿಂದ ಯಳವರ, ಸದಸ್ಯರಾದ ಬಾಬು ಪವರ್, ಯುವರಾಜ ರಾಠೋಡ್, ಪೋಷಕರಾದ ಶ್ರೀಮಂತ, ಪ್ರಶಾಂತ, ಚೆಂದಮ್ಮ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿ,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...