ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿನ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಜೊತೆಗೆ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಹಾಗೂ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಎಐಡವೈಒ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಮನವಿ ಸಲ್ಲಿಸಿದರು.
ಎಐಡಿವೈಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಾವಿರಾರು ಯುವಕರು ಮತ್ತು ಸಾರ್ವಜನಿಕರಿಂದ ಸಹಿ ಸಂಗ್ರಹಿಸಿದ ಅರ್ಜಿಪತ್ರಗಳನ್ನು ಹಾಗೂ ಮನವಿಯನ್ನು ಜಿಲ್ಲಾಧಿಕಾರಿ ಮುಖಾಂತರ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದರು.
ಮನವಿ ಸಲ್ಲಿಸಿ ಸಂಘಟನೆಸಂಘಟನೆ ಜಿಲ್ಲಾ ಅಧ್ಯಕ್ಷ ಜಗನಾಥ್ ಎಸ್ ಹೆಚ್ ಮಾತನಾಡಿ, ‘ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಭಯಾನಕ ರೂಪ ಪಡೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರದ 78 ಸಚಿವಾಲಯಗಳು ಹಾಗೂ ವಿವಿಧ ಇಲಾಖೆಗಳಲ್ಲೇ ಸುಮಾರು 9.78 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಸಂಘಟನೆ ತಿಳಿಸಿದೆ. ಇದೇ ರೀತಿಯ ಪರಿಸ್ಥಿತಿ ಬಹುತೇಕ ಎಲ್ಲಾ ರಾಜ್ಯಗಳಲ್ಲಿಯೂ ಇದೆ’ ಎಂದು ಹೇಳಿದೆ.
‘ರಾಜ್ಯದಲ್ಲಿಯೂ ಕಳೆದ ಹಲವು ತಿಂಗಳುಗಳಿಂದ ಸುಮಾರು 2.84 ಲಕ್ಷ ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದ್ದು, ಸರ್ಕಾರ ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದೆ. ಈ ಹುದ್ದೆಗಳ ಭರ್ತಿಯನ್ನು ಕೂಡಲೇ ಪ್ರಾರಂಭಿಸಿ ನಿರುದ್ಯೋಗಿ ಯುವಕರಿಗೆ ಅವಕಾಶ ಕಲ್ಪಿಸಬೇಕು’ ಎಂದು ಸಂಘಟನೆ ಒತ್ತಾಯಿಸಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ರಾಜ್ಯ ಬಜೆಟ್‌ನಲ್ಲಿ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಮನವಿ
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಈಶ್ವರ್ ಕೆ, ರಮೇಶ್ ದೇವಕರ್, ದೇವರಾಜ್ ಮಿರಲಕರ್, ದತ್ತು ಹುರಡೆಕರ್, ಸಚಿನ್ ಪವರ್, ಪ್ರಶಾಂತ ಹಾದಿಮನಿ, ಸಚಿನ್ ಸಾಗರ್, ವರುಣ್ ದೇಸಾಯಿ ಸೇರಿದಂತೆ ಇನ್ನಿತರರು ಇದ್ದರು.





