ಕಲಬುರಗಿ | ಸಿಲಿಂಡರ್ ಸುರಕ್ಷತೆ ಕುರಿತು ಜಾಗೃತಿ : ಅಗ್ನಿ ಅವಘಡ ಮೋಕ್ ಡ್ರಿಲ್ ಮೂಲಕ ಅರಿವು

Date:

ಸಿಲಿಂಡರ್ ಬಳಕೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಹಾಗೂ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಸಾರ್ವಜನಿಕರು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಅರಿವು ಮೂಡಿಸುವ ಉದ್ದೇಶದಿಂದ ಕಲಬುರ್ಗಿ ಅಗ್ನಿಶಾಮಕ ಠಾಣೆಯ ವತಿಯಿಂದ ಬುಧವಾರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಲಬುರಗಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಎಂ ಕೆ ಪ್ರವೀಣ್ ಅವರ ನೇತೃತ್ವದಲ್ಲಿ ಇಎಸ್‌ಐಸಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಅಗ್ನಿ ಅವಘಡ ಮೋಕ್ ಡ್ರಿಲ್‌ನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಳ್ಳುವ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ಅಗ್ನಿ ನಂದಿಸುವ ವಿಧಾನಗಳು ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಲಾಯಿತು.

1064564

ಮೋಕ್ ಡ್ರಿಲ್ ವೇಳೆ ಆಸ್ಪತ್ರೆ ಸಿಬ್ಬಂದಿಗೆ ನೇರ ಅನುಭವದ ಮೂಲಕ ತರಬೇತಿ ನೀಡಲಾಗಿದ್ದು, ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು. ಇದರಿಂದ ತುರ್ತು ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸುವ ಸಾಮರ್ಥ್ಯ ಹೆಚ್ಚುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಾದಗಿರಿ | ವಸತಿ ಯೋಜನೆಯಲ್ಲಿ ಅಕ್ರಮ ಆರೋಪ: ಜನವರಿ 8ರಂದು ರಸ್ತೆ ತಡೆದು ಪ್ರತಿಭಟನೆಗೆ ರೈತ ಸಂಘ ಕರೆ

ಈ ಜಾಗೃತಿ ಕಾರ್ಯಕ್ರಮದಲ್ಲಿ ಇಎಸ್‌ಐಸಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ಎಸ್.ವಿ. ಕ್ಷೀರಸಾಗರ್, ಡಾ. ಕೆ.ಪಿ. ಪದ್ಮಜಾ (ಡಿಎಮ್‌ಎಸ್), ಅಗ್ನಿಶಾಮಕ ಠಾಣಾಧಿಕಾರಿ ಎಂ.ಕೆ. ಪ್ರವೀಣ್, ಕೆ. ಪ್ರವೀಣ್ (ಎಇಇ), ಹರ್ಷವರ್ಧನ್ (ಜೆಇ), ಅಕ್ಷಯ್ ಕುಮಾರ್ (ಸೀನಿಯರ್ ಸೈಟ್ ಎಂಜಿನಿಯರ್), ಶ್ರೀರಾಮ್ ಹಗರಗಿ, ದಿನೇಶ್ ಸುತಾರ್, ರೇಣುಕಾದ್ಯ ಬಾಬ್ಜಿ ಹಾಗೂ ಶ್ಯಾಮ್ ದೇಗಾಂವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

1064388

ಕಾರ್ಯಕ್ರಮದ ಅಂತ್ಯದಲ್ಲಿ ಅಗ್ನಿ ಸುರಕ್ಷತೆ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿ, ಇಂತಹ ಜಾಗೃತಿ ಕಾರ್ಯಕ್ರಮಗಳು ಅನೇಕ ಅಮೂಲ್ಯ ಜೀವಗಳನ್ನು ರಕ್ಷಿಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...