ಕಲಬುರಗಿ | ಕಸದ ತೊಟ್ಟಿಯಾದ ಬಾಪುನಗರ ಬಡಾವಣೆ

Date:

ಕಲಬುರಗಿ ನಗರದ ದಕ್ಷಿಣ ಕ್ಷೇತ್ರದ ಬಡಾವಣೆ ಬಾಪುನಗರದಲ್ಲಿ ಎಲ್ಲಿ ನೋಡಿದರಲ್ಲಿ ಕಸದ ರಾಶಿ ಕಂಡುಬರುತ್ತವೆ. ಆದರೂ, ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಸ ಸಂಗ್ರಹಕ್ಕಾಗಿ ಅಪರೂಪಕ್ಕೆ ಪಾಲಿಕೆಯ ವಾಹ ಬರುತ್ತದೆ. ಬಡಾವಣೆಯಲ್ಲಿ ಒಳಚರಂಡಿ ಕಸ ತೆಗೆದು ರಸ್ತೆ ಬದಿಯಲ್ಲಿ ರಾಶಿ ಹಾಕಿ ಸುಮಾರು ದಿನಗಳೇ ಕಳೆದಿವೆ. ಆದರೂ, ಪಾಲಿಕೆ ಸಿಬ್ಬಂದಿಯಾಗಲೀ, ವಾಹನವಾಗಲೀ ಇತ್ತ ಸುಳಿದಿಲ್ಲ. ಕಸ ಕೊಂಡೊಯ್ದಿಲ್ಲ ಎಂದು ಸ್ಥಳೀಯರು ಕಿಡಿಕಾರುತ್ತಿದ್ದಾರೆ.

ಸಮಸ್ಯೆಯ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಸ್ಥಳೀಯರಾದ ಮುರಳಿಧರ್ ಉಪಾಧ್ಯಯ, “ಬಡಾವಣೆಯಲ್ಲಿ ಕಸದ ಸಮಸ್ಯೆ ಹೆಚ್ಚಾಗಿದೆ. ಪದೇ-ಪದೇ ದೂರು ನೀಡಿದರೂ ಪಾಲಿಕೆ ಅವರು ಇತ್ತ ಸುಳಿಯುತ್ತಿಲ್ಲ. ಚರಂಡಿ ತುಂಬಿ, ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತದೆ. ಗಬ್ಬು ನಾರುತ್ತದೆ. ಮನೆ ಒಳಗೂ ಕುಳಿತು ಊಟ ಮಾಡಲು ಆಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪುಟ್ಟ ಮಕ್ಕಳಿದ್ದಾರೆ. ಕೊಳಚೆ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆ ಸೊಳ್ಳೆಗಳಿಂದ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಭಯವಿದೆ. ಮಲೆರಿಯಾ, ಡೆಂಘಿಯಂತಹ ರೋಗಗಳು ಹರಿಡಿದರೆ ಹೊಣೆಯಾರು” ಎಂದು ಆಂತಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಪುನಗರ1

“ಬಾಪುನಗರದಲ್ಲಿ ಹಿಂದುಳಿದ ವರ್ಗದವರೇ ಜಾಸ್ತಿ ವಾಸವಾಗಿದ್ದಾರೆ. ನಮ್ಮ ಬಗ್ಗೆ ಜನಪ್ರತಿನಿಧಿ, ಅಧಿಕಾರಿಗಳು ಬೇಜವಾಬ್ದಾರಿ ತೋರಿಸುತ್ತಾರೆ” ಎಂದು ಆರೋಪಿಸಿದ್ದಾರೆ.

ಬಾಪುನಗರ ನಿವಾಸಿ ಅನುರಾಧ ಮಾತನಾಡಿ, “ಹತ್ತು ಇಪ್ಪತ್ತು ದಿನಗಳು ಕಳೆದರು ಕಸ ತೆಗೆದುಕೊಂಡು ಹೋಗುವುದಕ್ಕೆ ಪಾಲಿಕೆ ಸಿಬ್ಬಂದಿ ಬರುವುದಿಲ್ಲ. ನಾವು ಕಲಬುರಗಿ ನಗರದಲ್ಲಿಯೇ ಇದ್ದರೂ, ನಮಗೆ ಕುಡಿಯುವ ನೀರಿನ ಪೂರೈಕೆ ಇಲ್ಲ. ಜಿಲ್ಲಾಸ್ಪತ್ರೆಯಿಂದ ಪೈಪ್‌ ಹಾಕಿಕೊಂಡು ನೀರು ಪಡೆಯುತ್ತೇವೆ. ಕೆಲವೊಮ್ಮೆ ಅಲ್ಲಿಯೂ ನೀರು ಸಿಗುವುದಿಲ್ಲ” ಎಂದು ತಮ್ಮ ಅಳಲನ್ನು ತೋಡಿಕೊಂಡರು.

ನಿವಾಸಿ ಕರಣ್ ಮಾತನಾಡಿ, “ಬಡಾವಣೆಯಲ್ಲಿರುವ ಸರ್ಕಾರಿ ಶಾಲೆಯ ಸುತ್ತಲೂ ಕೂಡ ಸ್ವಚ್ಛತ್ತೆ ಇಲ್ಲ. ಶಾಲೆಗೆ ಮಕ್ಕಳು ಹೋಗುವುದೇ ಕಷ್ಟವಾಗಿದೆ. ಮಳೆ ಬಂದರೆ ಚರಂಡಿ ತುಂಬಿ ಮನೆ ಅಂಗಳಕ್ಕೆ ನೀರು ನುಗ್ಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...