ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ ಭೀಮ ಆರ್ಮಿ ರಸ್ತೆ ತಡೆ ಪ್ರತಿಭಟನೆ

Date:

ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣವನ್ನು ಖಂಡಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ವತಿಯಿಂದ ಸೋಮವಾರ ಕಾಳಗಿ ತಾಲೂಕಿನ ಕಂದಗೂಳ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ತಹಸಿಲ್ದಾರ್ ಕಾಳಗಿ ಅವರ ಮುಖಾಂತರ ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಭಾರತಕ್ಕೆ ಸ್ವಾತಂತ್ರ್ಯ ದೊರೆತು 75–76 ವರ್ಷಗಳು ಕಳೆದರೂ ದೇಶದಲ್ಲಿ ಜಾತಿ ವ್ಯವಸ್ಥೆಯ ವಿಷಬೀಜ ಇನ್ನೂ ಜೀವಂತವಾಗಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಕಾಳಗಿ ತಾಲೂಕು ಅಧ್ಯಕ್ಷ ಸದೀಪ್ ದೊಡ್ಡಮನಿ ಅವರು ಮಾತನಾಡಿ, ‘ಹುಬ್ಬಳ್ಳಿ ತಾಲೂಕಿನ ಇನಾಂರಾಪೂರ ಗ್ರಾಮದಲ್ಲಿ ದಲಿತ ಯುವಕ ಹಾಗೂ ಲಿಂಗಾಯತ ಯುವತಿ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಯುವತಿ ಏಳು ತಿಂಗಳ ಗರ್ಭಿಣಿಯಾಗಿದ್ದರೂ ಈ ವಿವಾಹಕ್ಕೆ ಆಕೆಯ ಕುಟುಂಬ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕುಟುಂಬದ ಭಯದಿಂದ ದಂಪತಿ ಬೇರೆ ಊರಲ್ಲಿ ವಾಸವಾಗಿದ್ದರು ಎನ್ನಲಾಗಿದೆ’ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಈ ನಡುವೆ ಶಿಮಂತ ಕಾರ್ಯಕ್ರಮದ ನೆಪದಲ್ಲಿ ಗರ್ಭಿಣಿ ಯುವತಿಯನ್ನು ಊರಿಗೆ ಕರೆಸಿಕೊಂಡು, ಆಕೆಯ ತಂದೆ ಹಾಗೂ ಸಹಚರರು ಕೊಡಲಿ ಸೇರಿದಂತೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೆ, ಯುವಕ ಹಾಗೂ ಅವನ ಕುಟುಂಬದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ’ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ರಾಜ್ಯ ಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ

‘ಈ ಅಮಾನವೀಯ ಹಾಗೂ ಕ್ರೂರ ಕೃತ್ಯವೆಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಮೃತ ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸಿ, ಜೀವ ಬೆದರಿಕೆ ಎದುರಿಸುತ್ತಿರುವ ಯುವಕ ಹಾಗೂ ಅವನ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕೆಂದು’ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಭೀಮ ಆರ್ಮಿ ಭಾರತ ಏಕತಾ ಮಿಷನ್ ಕಾಳಗಿ ತಾಲೂಕು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...