ಕಲಬುರಗಿ ನಗರದ ಹೊಸ ಆರ್‌ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದ ನಿಧನರಾದರು.
ಅಪಘಾತ ನಡೆದ ಬಳಿಕ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೈದರಾಬಾದ್ ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ನಿಧನರಾದರು ಎಂದು ತಿಳಿದುಬಂದಿದೆ.
ಪ್ರಸ್ತುತ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಯಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೊಯಿದ್ ಖಾನ್ ಖುಲಾಸೆ; ಮೋದಿಯುಗದ ನಿರಾಧಾರ ಮುಸ್ಲಿಂ ದ್ವೇಷಕ್ಕೆ ಮತ್ತೊಂದು ಪುರಾವೆ





