ಕಲಬುರಗಿ | ಬೈಕ್, ಟ್ರಾಕ್ಟರ್ ಅಪಘಾತ; ಪ್ರಾಣಾಪಾಯದಿಂದ ಪಾರಾದ ಯುವಕರು

Date:

ಅಫಜಲಪುರ ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನಲ್ಲಿ ಭಾನುವಾರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಬೈಕ್ ಹಾಗೂ ಟ್ರಾಕ್ಟರ್, ಟ್ರೈಲರ್ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಅಫಜಲಪುರದಿಂದ ತಾಲೂಕಿನ ಹವಳಗಾ ಗ್ರಾಮದ ವ್ಯಾಪ್ತಿಯಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆ ಕಡೆಗೆ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಡಬಲ್ ಟ್ರಾಕ್ಟರ್, ಟ್ರೈಲರ್ ತಿರುವಿನಲ್ಲಿ ಸಾಗುತ್ತಿದ್ದ ವೇಳೆ, ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ಟ್ರೈಲರ್ ಒಳಭಾಗಕ್ಕೆ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಬೈಕ್‌ನಲ್ಲಿ ಮೂವರು ಯುವಕರು ಪ್ರಯಾಣಿಸುತ್ತಿದ್ದರು. ಅಪಾಯ ಅರಿತ ತಕ್ಷಣವೇ ಅವರು ವಾಹನದಿಂದ ಹೊರಗೆ ಜಿಗಿದ ಕಾರಣ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಕಲ್ಯಾಣ ನಡಿಗೆ, ಹರಳಯ್ಯ ಜ್ಯೋತಿಯಾತ್ರೆಗೆ ಚಾಲನೆ

ಅಪಘಾತದ ನಂತರ ಕೆಲಕಾಲ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಇಕ್ಕಟ್ಟಾಗಿರುವ ಕಾರಣ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆ ಅಗಲಿಕರಣ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...