ಕಲಬುರಗಿ | ನದಿಗೆ ಹಾರಿದ್ದ ಯುವತಿ ಮೃತದೇಹ ಪತ್ತೆ; ನಾಲ್ಕು ದಿನಗಳ ಶೋಧ ಕಾರ್ಯಾಚರಣೆ ಪೂರ್ಣ

Date:

ನಗರದ ಕುರಿಕೋಟಾ ಹಳೆಯ ಸೇತುವೆಯಿಂದ ಯುವತಿಯೋರ್ವಳು ನದಿಗೆ ಹಾರಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಈ ಸಂಬಂಧ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಸೋಮವಾರ ಬೆಳಿಗ್ಗೆ ಅಂತ್ಯಗೊಂಡಿದ್ದು, ಯುವತಿಯ ಶವ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಯುವತಿಯನ್ನು ಕಮಲಾಪುರ ತಾಲೂಕಿನ ಮಹಾಗಾಂವ್ ಗ್ರಾಮದ ನಿವಾಸಿ ತ್ರೀವೇಣಿ ಸೂರ್ಯಕಾಂತ (30) ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಮಹಾಗಾಂವ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

‘ಶುಕ್ರವಾರದಿಂದಲೇ ಅಗ್ನಿಶಾಮಕ ದಳ, ಈಜುಗಾರರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ನದಿಯಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸತತ ನಾಲ್ಕು ದಿನಗಳ ಶೋಧದ ಬಳಿಕ ಸೋಮವಾರ ಬೆಳಿಗ್ಗೆ ಯುವತಿಯ ಶವ ಪತ್ತೆಯಾಗಿದೆ’ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಲಾರಿ, ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

‘ನಾಲ್ಕು ದಿನಗಳ ಕಾಲ ನೀರಿನಲ್ಲಿ ಇದ್ದ ಕಾರಣ ಶವದ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ದುರ್ವಾಸನೆ ಬೀರುತ್ತಿದ್ದ ಹಿನ್ನೆಲೆಯಲ್ಲಿ ಶವವನ್ನು ಸುಡುವ ಮೂಲಕ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ.’ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...