ಕಲಬುರಗಿ | “ಯುವಜನರಿಗೆ ನಿರಾಸೆ ಮೂಡಿಸಿದ ಬಜೆಟ್”; ಎಐಡಿವೈಒ ಆರೋಪ

Date:

ಮುಖ್ಯಮಂತ್ರಿ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್ ಯುವಜನರಿಗೆ ನಿರಾಸೆ ಉಂಟುಮಾಡುವಂತಿದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಕಲಬುರಗಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಅಧ್ಯಕ್ಷ ಜಗನ್ನಾಥ ಎಸ್.ಹೆಚ್ ಅವರು, ‘ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದು ಈ ವರ್ಷದಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹವಾದರೂ, 800 ಕೆಪಿಎಸ್ ಶಾಲೆಗಳನ್ನು ತೆರೆಯುವ ಯೋಜನೆಯ ಪರಿಣಾಮವಾಗಿ ರಾಜ್ಯದ 40,ಸಾವಿರಕ್ಕೂ ಹೆಚ್ಚು ಶಾಲೆಗಳು ಮುಚ್ಚುವ ಸಾಧ್ಯತೆ ಇದೆ ಎಂದು ತಿಳಿಸಿದರು. ಇದರಿಂದ ಸಾವಿರಾರು ಶಿಕ್ಷಕರ ಹುದ್ದೆಗಳು ಕಡಿತಗೊಳ್ಳುವ ಭೀತಿ ಎದುರಾಗಿದ್ದು, ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಬದಲು ಇರುವ ಉದ್ಯೋಗಗಳನ್ನು ನಾಶಗೊಳಿಸುವಂತ ಯೋಜನೆಯಾಗಿದೆ’ ಎಂದು ಅವರು ಟೀಕಿಸಿದ್ದಾರೆ.

‘ಯುವಜನರ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಯಾವುದೇ ನಿರ್ದಿಷ್ಟ ಯೋಜನೆಗಳು ಅಥವಾ ಸ್ಪಷ್ಟ ಉದ್ಯೋಗ ನೀತಿ ಈ ಬಜೆಟ್‌ನಲ್ಲಿ ಕಾಣಿಸಿಲ್ಲ. ಕಳೆದ ವರ್ಷ ಸರ್ಕಾರ ಘೋಷಿಸಿದ ಯುವಜನ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯವಾದ ಕಾರ್ಯಯೋಜನೆಯೂ ಇಲ್ಲ ಎಂದು ಅವರು ಹೇಳಿದ್ದಾರೆ. ಜೊತೆಗೆ ನಿರುದ್ಯೋಗಿ ಯುವಜನರಿಗೆ ನೀಡಲಾಗುತ್ತಿದ್ದ ಯುವನಿಧಿ ಯೋಜನೆಗೆ ಈ ಬಜೆಟ್‌ನಲ್ಲಿ ಎಷ್ಟು ಅನುದಾನ ಮೀಸಲಿಟ್ಟಿದೆ ಎಂಬುದರ ಕುರಿತು ಸ್ಪಷ್ಟತೆ ನೀಡಲಾಗಿಲ್ಲ’ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಇನ್ನೊಂದೆಡೆ, ಮದ್ಯ ಮಾರಾಟದಿಂದ ಬರುವ ಅಬಕಾರಿ ತೆರಿಗೆಯಿಂದ ಸುಮಾರು 45 ಸಾವಿರ ಕೋಟಿ ರೂಪಾಯಿ ಆದಾಯವನ್ನು ಸರ್ಕಾರ ನಿರೀಕ್ಷಿಸಿದ್ದು, ಇದು ಮದ್ಯ ಮಾರಾಟವನ್ನು ಹೆಚ್ಚಿಸುವ ಉದ್ದೇಶವನ್ನು ತೋರಿಸುತ್ತದೆ. ಮದ್ಯ ಮಾರಾಟ ಹೆಚ್ಚಳದಿಂದ ಜನಸಾಮಾನ್ಯರ, ವಿಶೇಷವಾಗಿ ಯುವಜನರ ಹಾಗೂ ಕುಟುಂಬಗಳ ನೆಮ್ಮದಿಗೆ ಧಕ್ಕೆಯಾಗಲಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಐತಿಹಾಸಿಕ 17ನೇ ಬಜೆಟ್: ಸಿದ್ದರಾಮಯ್ಯರಿಗೆ ಅಭಿನಂದನೆಗಳ ಮಹಾಪೂರ

ಒಟ್ಟಾರೆ, ‘ಯುವಜನರ ಆಶೋತ್ತರಗಳನ್ನು ಪೂರೈಸದ ಈ ಬಜೆಟ್ ಯುವಜನರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಎಐಡಿವೈಓ ಕಲಬುರಗಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ’ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...