ಕಲಬುರಗಿ ತಾಲ್ಲೂಕಿನ ಗೊಬ್ಬರ (ಬಿ)- ಚೌಡಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ. ಘಟನೆಯ ಮಾಹಿತಿ ಪಡೆದ ದೇವಲ ಗಾಣಗಾಪುರ ಪೊಲೀಸ್ ಠಾಣೆಯ ಪಿಎಸ್‌ಐ ಸಂಗೀತಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ₹10 ಸಾವಿರ ಲಂಚ ಪಡೆಯುತ್ತಿದ್ದ ಎಫ್‌ಡಿಎ ಲೋಕಾಯುಕ್ತ ಬಲೆಗೆ
ಟ್ಯಾಂಕರ್ ಚಾಲಕರ ಅಜಾಗರೂಕತೆಯಿಂದಲೇ ಅಪಘಾತ ಸಂಭವಿಸಿರುವುದು ತಿಳಿದು ಬಂದಿದೆ. ಈ ಕುರಿತು ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.





