ಹೋಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇರೆಗೆ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯನೊಬ್ಬನ ವಿರುದ್ಧ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಳಂದ ಕಾಲೋನಿಯ ನಿವಾಸಿಯಾಗಿರುವ ಹಾಗೂ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ ಸದಸ್ಯ ನಾಗರಾಜ್ ಜಯಪ್ರಕಾಶ್ ಸಾಗರೆ ಎಂಬಾತ ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿಯಾಗಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹೇಳಿಕೆಗಳಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘದ ಅಧ್ಯಕ್ಷ ಬಸವರಾಜ ಮಾಲಿಪಾಟೀಲ್ ಅವರು ಸ್ಟೇಷನ್ ಬಝಾರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಯುಪಿಎಸ್ಸಿ : ಹಿಂದುಳಿದ ಜಿಲ್ಲೆಯ ಅಭ್ಯರ್ಥಿಗಳ ಸದ್ದು, ಗಿರಿ ಜಿಲ್ಲೆಗೆ ಮೂಡಿದ ಹೆಮ್ಮೆಯ ಗರಿ
ಬಸವರಾಜ ಮಾಲಿಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.





