ಕಲಬುರಗಿ | ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಯುಜಿಸಿ ನಿಯಮ ಜಾರಿಗೆ ಒತ್ತಾಯಿಸಿ ಫೆ.9ರಂದು ರಾಜ್ಯಾದ್ಯಂತ ದಸಂಸ ಪ್ರತಿಭಟನೆ

Date:

ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್‌ (ಯುಜಿಸಿ) ತಂದಿರುವ ನಿಯಮಗಳಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ಎಸ್‌ಸಿ, ಎಸ್‌ ಟಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತ್ಯೇಕ ಯುಜಿಸಿ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಫೆಬ್ರವರಿ 9ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಡಿ ಜಿ ಸಾಗರ ಮಾತನಾಡಿದ, ವಿಶ್ವವಿದ್ಯಾಲಯಗಳು ಜ್ಞಾನಾರ್ಜನೆಯ ಕೇಂದ್ರಗಳಾಗಬೇಕಾದರೆ ಅಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಸಮಾನತೆ, ಸುರಕ್ಷತೆ ಹಾಗೂ ಗೌರವದ ವಾತಾವರಣ ಇರಬೇಕು ಎಂದು ಹೇಳಿದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಎಸ್‌.ಸಿ ಹಾಗೂ ಎಸ್‌.ಟಿ ವಿದ್ಯಾರ್ಥಿಗಳ ಮೇಲೆ ಧರ್ಮ ಹಾಗೂ ಜಾತಿ ಆಧಾರಿತವಾಗಿ ನಡೆಯುತ್ತಿರುವ ಕಿರುಕುಳ, ತಾರತಮ್ಯ ಮತ್ತು ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ’ ಎಂದು ಹೇಳಿದರು.

‘ಈ ಹಿನ್ನೆಲೆಯಲ್ಲಿ ಇಂತಹ ಅಕ್ರಮಗಳನ್ನು ತಡೆಗಟ್ಟಲು ಯುಜಿಸಿ ರೂಪಿಸಿರುವ ನಿಯಮಗಳನ್ನು ದಲಿತ ಸಂಘರ್ಷ ಸಮಿತಿ ಸಂಪೂರ್ಣವಾಗಿ ಸ್ವಾಗತಿಸುತ್ತದೆ. ಆದರೆ ಈ ನಿಯಮಗಳ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಅವು ಅನುಷ್ಠಾನಗೊಳ್ಳದೆ ಉಳಿದಿವೆ. ಇದರ ಪರಿಣಾಮವಾಗಿ ದಲಿತ ವಿದ್ಯಾರ್ಥಿಗಳು ಮತ್ತೆ ಅನ್ಯಾಯ, ಅವಮಾನ ಮತ್ತು ಅಸುರಕ್ಷಿತ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣವೇ ಕಾನೂನು ಕ್ರಮಗಳನ್ನು ಕೈಗೊಂಡು ತಡೆಯಾಜ್ಞೆಯನ್ನು ತೆರವುಗೊಳಿಸಿ ಯುಜಿಸಿ ನಿಯಮಗಳನ್ನು ಜಾರಿಗೊಳಿಸಬೇಕು’ ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳು ನಿರ್ಭಯವಾಗಿ ಹಾಗೂ ಗೌರವಯುತವಾಗಿ ಶಿಕ್ಷಣ ಪಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಾಗರ ಹೇಳಿದರು. ಇತ್ತೀಚಿನ ದಿನಗಳಲ್ಲಿ ವಿವಿ ಕ್ಯಾಂಪಸ್‌ಗಳಲ್ಲಿ ಕೋಮುವಾದಿಕರಣ ಹೆಚ್ಚಾಗುತ್ತಿರುವುದು ಸಮಾಜಕ್ಕೆ ಅಪಾಯಕಾರಿಯಾಗಿದೆ. ಇದರಿಂದಾಗಿ ದಲಿತ ವಿದ್ಯಾರ್ಥಿಗಳ ಮೇಲೆ ಕಿರುಕುಳ ಮತ್ತು ಮಾನಸಿಕ ಒತ್ತಡ ಹೆಚ್ಚುವ ಸಾಧ್ಯತೆಗಳಿದ್ದು, ಇದು ಭವಿಷ್ಯದ ಭಾರತಕ್ಕೆ ಮಾರಕವಾಗಲಿದೆ’ ಎಂದು ಅವರು ಎಚ್ಚರಿಸಿದರು.

‘ದಲಿತ ವಿದ್ಯಾರ್ಥಿಗಳ ಶೈಕ್ಷಣಿಕ ಭದ್ರತೆ, ಮಾನಸಿಕ ನೆಮ್ಮದಿ ಹಾಗೂ ಸಮಾನ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರಗಳು ತಕ್ಷಣ ಸ್ಪಂದಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 9ರಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನಾ ಮೆರವಣಿಗೆ ನಡೆಸುವುದರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು’ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

ಈ ವೇಳೆ ಜಿಲ್ಲಾ ಮುಖಂಡರಾದ ಸುರೇಶ್ ಹಾದಿಮನಿ, ಹೆಚ್. ಶಂಕರ, ಉಮೇಶ್ ನರೋಣಾ, ಎಸ್.ಪಿ. ಸುಳ್ಳದ್ ಸೇರಿದಂತೆ ಸಮಿತಿಯ ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...