ಕಲಬುರಗಿ | ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ; ಡಿಸಿ ಕಚೇರಿ ಎದುರು ಎತ್ತಿನಬಂಡಿ, ಟ್ರಾಕ್ಟರ್‌ಗಳೊಂದಿಗೆ ರೈತರ ಧರಣಿ

Date:

ಎಂ ಎಸ್ ಸ್ವಾಮಿನಾಥನ್ ವರದಿ ಪ್ರಕಾರ ತೊಗರಿ ಬೆಳೆಗೆ ಪ್ರತಿ ಕ್ವಿಂಟಲ್‌ಗೆ ₹12,500 ಬೆಂಬಲ ಬೆಲೆ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಎತ್ತಿನಬಂಡಿ ಹಾಗೂ ಟ್ರಾಕ್ಟರ್‌ಗಳೊಂದಿಗೆ ಆಹೋರಾತ್ರಿ ಧರಣಿ ಆರಂಭಿಸಿದರು.

ಧರಣಿಯನ್ನು ಉದ್ದೇಶಿಸಿ ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ‘ತೊಗರಿಗೆ ಕೆಎಂಎಫ್ ಮಾದರಿಯಲ್ಲಿ ಖರೀದಿ ಕೇಂದ್ರ ಸ್ಥಾಪಿಸಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ತಲಾ ₹1,000 ಪ್ರೋತ್ಸಾಹಧನ ನೀಡಬೇಕು, ವಿದೇಶಿ ತೊಗರಿಗೆ ಶೇ.50ರಷ್ಟು ಆಮದು ಶುಲ್ಕ ವಿಧಿಸಬೇಕು, ತೊಗರಿ ತುರ್ತು ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಬೆಳೆ ವಿಮೆ ಮಂಜೂರು ಮಾಡಬೇಕು ಎಂದು ರೈತರು ಒತ್ತಾಯಿಸಿದರು.
ಇದೇ ವೇಳೆ ರಾಷ್ಟ್ರೀಕೃತ ಬ್ಯಾಂಕುಗಳ ರೈತರ ಸಾಲಮನ್ನಾ ಮಾಡಬೇಕು ಹಾಗೂ ರೈತರು ಕೃಷಿ ಕಾರ್ಮಿಕರ ವಿರೋಧಿಯಾಗಿರುವ ವಿಬಿ ಜಿರಾಮ್ ಜಿ ಕಾಯ್ದೆ ಜಾರಿಯನ್ನು ತಕ್ಷಣ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಟ್ರ್ಯಾಕ್ಟರ್‌ ಚಲಿಸುವಾಗ ರೀಲ್ಸ್‌ : ಚಕ್ರಕ್ಕೆ ಸಿಲುಕಿ ಚಾಲಕ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರಣಿಯಲ್ಲಿ ರೈತ ಮುಖಂಡರಾದ ಮೌಲಾ ಮುಲ್ಲಾ, ಉಮಾಪತಿ ಪಾಟೀಲ್, ಭೀಮಾಶಂಕರ ಮಾಡ್ಯಾಳ, ಕರೆಪ್ಪ ಕರಗೊಂಡ, ಸಿದ್ದು ಎಸ್ಎಲ್, ಗೌರಮ್ಮ ಪಾಟೀಲ್, ಸಿದ್ದಪ್ಪ ಕಲಶೆಟ್ಟಿ, ಮೌನೇಶ್ ನಾಲವಾರ, ವೀರಣ್ಣ ಗಂಗಾಣಿ, ಸಿದ್ದಮ್ಮ ಮುತ್ತಗಿ, ಜಾಫರ್ ಖಾನ್, ಗುಂಡಪ್ಪ ಅರಣಕಲ, ಸಿದ್ದಾರ್ಥ್ ಠಾಕೂರ್, ಸಲೀಂ ಅಹಮದ್ ಚಿತ್ತಾಪುರ, ವಿದ್ಯಾಸಾಗರ ಮಾಲಿ ಬಿರಾದಾರ, ಪ್ರಭು ಖೇಣಿ, ಶಂಕರ ಹೂಗಾರ, ಶ್ಯಾಮರಾವ್ ದಿಗ್ಗಾಂವ, ಇಬ್ರಾಹಿಂ ಪಟೇಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...