ಕಲಬುರಗಿ | ವಿದ್ಯಾರ್ಥಿಗಳಿಗೆ ದಂತ ಆರೋಗ್ಯ ತಪಾಸಣೆ: ಸ್ವಚ್ಛತೆ ಕುರಿತು ಜಾಗೃತಿ ಶಿಬಿರ

Date:

ದಂತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರ ಹಾಗೂ ಬಾಯಿ ಸ್ವಚ್ಛತೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ ನಗರದ ತಾರಫೈಲ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಿಶೇಷ ಶಿಬಿರದ ಎರಡನೇ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ದಂತ ಆರೋಗ್ಯ ತಪಾಸಣಾ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿಯ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ. ಸಂಧ್ಯಾ ಕಾನೇಕರ್ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿ ಮಾತನಾಡಿ ಅವರು ‘ದಂತ ಆರೋಗ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು. ದಿನಕ್ಕೆ ಕನಿಷ್ಠ ಎರಡು ಬಾರಿ ಸರಿಯಾದ ವಿಧಾನದಲ್ಲಿ ಹಲ್ಲುಗಳನ್ನು ಬ್ರಷ್ ಮಾಡುವುದು, ಪ್ರತಿ ಮೂರು ತಿಂಗಳಿಗೊಮ್ಮೆ ಬ್ರಷ್ ಬದಲಾಯಿಸುವುದು, ನಾಲಿಗೆಯನ್ನು ಪ್ರತಿದಿನ ಸ್ವಚ್ಛಗೊಳಿಸುವುದು, ಫ್ಲಾಸಿಂಗ್ ಅಭ್ಯಾಸ ಮಾಡುವುದು ಹಾಗೂ ಸಿಹಿ ಪದಾರ್ಥಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬೇಕು’ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1584727 1

‘ಹಲ್ಲು ಮತ್ತು ಬಾಯಿ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿ ಮೂರು ತಿಂಗಳಿಗೊಮ್ಮೆ ದಂತ ವೈದ್ಯರನ್ನು ಭೇಟಿ ಮಾಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ತಂಬಾಕು, ಧೂಮಪಾನ ಸೇರಿದಂತೆ ಹಾನಿಕಾರಕ ಉತ್ಪನ್ನಗಳ ಬಳಕೆಯನ್ನು ತಡೆಯುವುದರಿಂದ ಕ್ಯಾನ್ಸರ್ ಸೇರಿದಂತೆ ಹಲವಾರು ದಂತ ಸಮಸ್ಯೆಗಳನ್ನು ತಡೆಗಟ್ಟಬಹುದು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಫ್ಜಲ್ಪುರ ತಾಲೂಕು ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ. ಆರಾಧನ ರಾಥೋಡ್ ಹಾಗೂ ಚಿಂಚೋಳಿ ತಾಲೂಕು ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಶಿಬಿರಾರ್ಥಿಗಳ ದಂತ ಮತ್ತು ಬಾಯಿ ತಪಾಸಣೆ ನಡೆಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಿದರು.

1584786 3

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ, ದೇವರಾಜ್ ಆರ್ ಕನ್ನಡಿಗ ಅವರು ಜೀವನ ಕೌಶಲ್ಯಗಳ ಕುರಿತು ಅರಿವು ಮೂಡಿಸಿ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಕರ್ತವ್ಯದಲ್ಲೇ ಪೌರ ಕಾರ್ಮಿಕ ಹೃದಯಾಘಾತದಿಂದ ಮೃತ

ಎಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕರಾದ ಎಂ.ಬಿ. ಪಾಟೀಲ್ ಕಾರ್ಯಕ್ರಮಕ್ಕೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿಗಳಾದ ಅರಿಫಾ ಖಾತೂನ್, ಸಹಾಯಕ ಶಿಬಿರಾಧಿಕಾರಿಗಳಾದ ಗೋವಿಂದ (ಸಿ.ಪಿ. ವಿಭಾಗ), ಶ್ರೀದೇವಿ ಗಟ್ಟು, ವಿಜ್ಞಾನ ವಿಭಾಗದ ಡಾ. ಸಪ್ನಾ, ಎನ್‌ಸಿ ವಿಭಾಗದ ಆಶಾಲತಾ, ಅಧೀಕ್ಷಕರಾದ ಪರಶುರಾಮ್ ಸೇರಿದಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...