ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ನಗರದ ಹಲವೆಡೆ ಪ್ರತಿಭಟನೆ

Date:

ಕಲಬುರಗಿಯ ಲುಂಬಿಣಿ ಉದ್ಯಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಲಾಗಿದೆ. ಕೃತ್ಯವನ್ನು ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ನಗರದ ಹಲವೆಡೆ ದಲಿತ ಮುಖಂಡರು, ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.

ಸೋಮವಾರ ರಾತ್ರಿ ಕೃತ್ಯ ನಡೆದಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ನಗರದಲ್ಲಿ ಜಮಾಯಿಸಿರುವ ಹಲವಾರು ಸಂಘಟಕರು, ಕಾರ್ಯಕರ್ತರು ನಗರದ ರಾಮ ಮಂದಿರ ವೃತ್ತ, ನಾಗನಹಳ್ಳಿ ರಿಂಗ್ ರೋಡ್, ಲುಂಬಿಣಿ ಉದ್ಯಾನ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ.

“ಅಂಬೇಡ್ಕರ್‌ಗೆ ಅಪಮಾನ ಮಾಡಿರುವ ಕಿಡಿಗೇಡಿಗಳು ಪಟಾಕಿ ಸಿಡಿಸಿದ್ದಾರೆ. ಘಟನೆ ನಡೆದು ಹಲವಾರು ಗಂಟೆಗಳು ಕಳೆದಿವೆ. ಆದರೂ, ಆರೋಪಿಗಳನ್ನು ಬಂಧಿಸಲಾಗಿಲ್ಲ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಭೇಟಿ ನೀಡಿದ್ದು, “ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಶೀಘ್ರದಲ್ಲೇ ಬಂಧಿಸಿ, ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಅಲ್ಲದೆ, ಲುಂಬಿಣಿ ಉದ್ಯಾನಕ್ಕೆ ಬಂದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ್ದಾರೆ. “ಪ್ರಕರಣದ ತನಿಖೆ ಮುಗಿದ ಬಳಿಕ, ಹೊಸ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ” ಎಂದು ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...