ಕಲಬುರಗಿ | ರಂಜಾನ್ ಪ್ರಯುಕ್ತ ನಿರ್ಗತಿಕರಿಗೆ ದಿನಸಿ ಕಿಟ್ ವಿತರಣೆ; ಡಾ. ಫಾರೂಕ್ ಮಣ್ಣೂರ

Date:

ರಂಜಾನ್ ಹಬ್ಬದ ಅಂಗವಾಗಿ ಸಮಾಜ ಸೇವಕ ಡಾ. ಫಾರೂಕ ಮಣ್ಣೂರ ಅವರು ಬಡ ಹಾಗೂ ನಿರ್ಗತಿಕ ಮುಸ್ಲಿಂ ಕುಟುಂಬಗಳಿಗೆ ಶುಕ್ರವಾರ ದಿನಸಿ ಕಿಟ್‌ಗಳನ್ನು ವಿತರಿಸಿ ಮಾನವೀಯತೆ ಮೆರೆದರು.

ಚಿಂಚೋಳಿ ತಾಲೂಕಿನ ಸುಲೇಪೇಟ, ಕುಪನೂರ, ಗಾರಂಪಳ್ಳಿ, ದಸ್ತಾಪೂರ ಸೇರಿದಂತೆ ಹಲವು ಗ್ರಾಮಗಳು ಹಾಗೂ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿನ ಬಡ ಕುಟುಂಬಗಳಿಗೆ ಅಗತ್ಯ ದಿನಸಿ ಸಾಮಗ್ರಿಗಳಿರುವ ಕಿಟ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಫಾರೂಕ ಮಣ್ಣೂರ ಮಾತನಾಡಿ, ‘ರಂಜಾನ್ ಮಾಸವು ಉಪವಾಸ, ಪ್ರಾರ್ಥನೆ, ತ್ಯಾಗ ಮತ್ತು ದಾನಧರ್ಮದ ಮಹತ್ವವನ್ನು ಸಾರುವ ಪವಿತ್ರ ಕಾಲ. ಸಮಾಜದ ದುರ್ಬಲ ವರ್ಗದವರ ಸಂಕಷ್ಟವನ್ನು ಅರಿತು ಅವರಿಗೆ ನೆರವಾಗುವುದು ಈ ಮಾಸದ ಮುಖ್ಯ ಉದ್ದೇಶ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬಡ ಕುಟುಂಬಗಳು ಹಬ್ಬವನ್ನು ಸಂತೋಷದಿಂದ ಆಚರಿಸಬೇಕೆಂಬ ಉದ್ದೇಶದಿಂದ ಈ ಕಿಟ್‌ಗಳನ್ನು ವಿತರಿಸಲಾಗಿದೆ. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಸಹಾನುಭೂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಬಲಪಡಿಸುತ್ತವೆ. ಎಲ್ಲಾ ಧರ್ಮಗಳ ಜನರು ಪರಸ್ಪರ ಗೌರವ ಮತ್ತು ಪ್ರೀತಿಯಿಂದ ಹಬ್ಬಗಳನ್ನು ಆಚರಿಸುವ ಮೂಲಕ ಏಕತೆ ಸಾರಬೇಕು’ ಎಂದು ಅವರು ಕರೆ ನೀಡಿದರು.

ಇದೇ ವೇಳೆ ಸಾಲೇಬೀರನಳ್ಳಿ ಗ್ರಾಮದ ಮುಸ್ಲಿಂ ಸಮಾಜದ ಅಧ್ಯಕ್ಷ ಜಮೀರೊದ್ದಿನ ಪಟೇಲ್ ಅವರು ಮಾತನಾಡಿ, ‘ಬಡವರ ನೆರವಿಗೆ ಧಾವಿಸಿರುವುದು ಶ್ಲಾಘನೀಯ. ಇಂತಹ ಸೇವೆಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತವೆ’ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂಗವಾಗಿ ಸಾಲೇಬೀರನಳ್ಳಿ ಮಸೀದಿಯಲ್ಲಿ ಇಫ್ತಾರ್ ಕೂಟವೂ ನಡೆಯಿತು. ಉಪವಾಸ ಮುಕ್ತಾಯದ ನಂತರ ಭಕ್ತರು ಒಟ್ಟಾಗಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಇದನ್ನು ಓದಿದ್ದೀರಾ? ಯಾದಗಿರಿ | ಬ್ರಿಡ್ಜ್ ಎತ್ತರ ಹೆಚ್ಚಿಸುವಂತೆ ಆಗ್ರಹಿಸಿ ರೈತರ ಮನವಿ

ಈ ಕಾರ್ಯಕ್ರಮದಲ್ಲಿ ಸದ್ದಾಂ ವಜೀರಗಾಂವ, ಬುರಾನ ಪಟೇಲ್, ಶೇಖ್ ಅಹ್ಮದ್ ಪಟೇಲ್, ನವಾಜ್ ಮೌಜನ್, ಯಾಸೀನ್ ನಾಗೂರ, ಇಮಾಮ್ ಸಾಬ್, ಸಂಜೀವಕುಮಾರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಒಟ್ಟಾರೆ, ರಂಜಾನ್ ಹಬ್ಬದ ಸಂದರ್ಭದಲ್ಲಿ ನಡೆದ ಈ ಸೇವಾ ಕಾರ್ಯವು ಸಮಾಜದಲ್ಲಿ ಸಹಾನುಭೂತಿ, ಮಾನವೀಯತೆ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...

ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...