ಕಲಬುರಗಿ | ₹10 ಸಾವಿರ ಲಂಚ ಪಡೆಯುತ್ತಿದ್ದ ಎಫ್‌ಡಿಎ ಲೋಕಾಯುಕ್ತ ಬಲೆಗೆ

Date:

ಹೊಲದ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ ಹತ್ತು ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಜೇವರ್ಗಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಬಿದ್ದಿದ್ದಾರೆ.

ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ವಿಷಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಫ್‌ಡಿಎ ಸತೀಶ್ ರಾಠೋಡ ಬಂಧಿತ ಆರೋಪಿಯಾಗಿದ್ದಾರೆ.

ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ಶಿವಕುಮಾರ ಬಸಪ್ಪ ಹೆಗಡೆ ಅವರ ಮಾವ ಪಾಂಡುರಂಗ ಅವರ ಹೆಸರಿನಲ್ಲಿರುವ ಹಂಚಿನಾಳ ಗ್ರಾಮದ ಕೃಷಿ ಭೂಮಿಯ ಪಹಣಿಯಲ್ಲಿ ತಪ್ಪಾಗಿ ದಾಖಲಾಗಿದ್ದ ಹೆಸರನ್ನು ತಿದ್ದುಪಡಿ ಮಾಡಿ, ತಹಶೀಲ್ದಾರ್ ಸಹಿ ಪಡೆದು ಸಹಾಯಕ ಆಯುಕ್ತರಿಗೆ ಫೈಲ್ ಕಳುಹಿಸುವುದಾಗಿ ಹೇಳಿ ಆರೋಪಿಯು ಹತ್ತು ಸಾವಿರ ಲಂಚ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಲಬುರಗಿ | ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆಯ ಆತ್ಮಹತ್ಯೆ

ಈ ಕುರಿತು ದೂರು ದಾಖಲಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ತನಿಖಾಧಿಕಾರಿ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಮುರಗುಂಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...