ಕಲಬುರಗಿ | ಕೂಲಿ ಕಾರ್ಮಿಕರಿಗೆ ಉಚಿತ್ ಬಸ್ ಪಾಸ್ ನೀಡುವಂತೆ ಒತ್ತಾಯ

Date:

ಹಿಂದಿನ ಸರ್ಕಾರದಲ್ಲಿ ಕೂಲಿ ಕಾರ್ಮಿಕರಿಗೆ ಉಚಿತ್ ಬಸ್ ಪಾಸ್ ನೀಡಲಾಗಿತ್ತು. ಅದನ್ನ ಮತ್ತೆ ಜಾರಿಗೆ ತಂದು ಬಡ ಕೂಲಿಕಾರ್ಮಿಕರಿಗೆ ಅನುಕುಲಮಾಡಿಕೊಡಬೇಕು ಎಂದು ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಸಂಘ ಒತ್ತಾಯಿಸಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್‌ ಪ್ರಸನ್ನ ಕುಮಾರ ಮೊಘೆಕರ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಕಾರ್ಯಧ್ಯಕ್ಷ ದೇವೇಂದ್ರ ಈ ತಳವಾರ, “ಹಿಂದಿನ ಸರ್ಕಾರದಲ್ಲಿದ್ದ ಕೂಲಿಕಾರ್ಮಿಕರಿಗೆ ಉಚಿತ್ ಬಸ್ ಪಾಸ್ ನೀಡುವ ಯೋಜನೆಯನ್ನು ಮುಂದುವರಿಸಬೇಕು. ಉತ್ತರ ಕರ್ನಾಟಕದಲ್ಲಿ ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಕಾರ್ಮಿಕರಿಗೆ ತಲುಪಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರವು ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌ ನೀಡುವ ಸೌಲಭ್ಯವನ್ನು ಪುನರಾರಂಭಿಸಬೇಕು. ಆ ಮೂಲಕ ಉತ್ತರ ಕರ್ನಾಟಕದ ಕಾರ್ಮಿಕರಿಗೆ ಅನೂಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯದರ್ಶಿ ಮಲ್ಲಣ್ಣಗೌಡ ರಾಯಚೂರ ಜಮಖಂಡಿ, ಮರೆಪ್ಪ ಖಂಡಾಳಕರ್ ಗುಡೂರ, ಮೈಹೀಬುಬ್ ಕಂಬಾರ, ಚಂದ್ರಕಾಂತ್ ತಳವಾರ, ಲಗಮಣ್ಣ ಕೂಟನೂರ, ವಿರೇಶ ತಳವಾರ, ಗುರಣ್ಣ ಬಡಿಗೇರ, ಗುರು ಜೈನಾಪೂರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...