ಕಲಬುರಗಿ | ಮನರೇಗಾ ಬದಲಿಗೆ ಹೊಸ ಮಸೂದೆ ವಿರೋಧಿಸಿ ; ಗ್ರಾಕೋಸ್ ಪ್ರತಿಭಟನೆ

Date:

ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸಿ, ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ತರುವ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ–2025 (VB-G RAM G) ಅನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ಸೋಮವಾರ ಸಂಸದರ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಂಸದರ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಕಲಬುರಗಿ ಸಂಸದರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಗ್ರಾಕೋಸ್ ಸಂಘದ ಮುಖಂಡ ಶರಣಗೌಡ ಪಾಟೀಲ್ ಮಾತನಾಡಿ, ‘ಕಾರ್ಮಿಕರು ಹಾಗೂ ಅವರ ಸಂಘಟನೆಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸದೆ ಕೇಂದ್ರ ಸರ್ಕಾರ ಈ ಮಸೂದೆಯನ್ನು ರಚಿಸಿದೆ” ಎಂದು ಆಕ್ಷೇಪಿಸಿದರು.
ಈ ಮಸೂದೆ ಮನರೇಗಾ 2005 ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಹುನ್ನಾರವಾಗಿದ್ದು, ಬೇಡಿಕೆ ಆಧಾರಿತ ಉದ್ಯೋಗ ಖಾತರಿ ಹಕ್ಕನ್ನು ಕೇಂದ್ರಿಕೃತ, ವಿವೇಚನಾಯುಕ್ತ ಹಾಗೂ ಬಜೆಟ್ ನಿಯಂತ್ರಿತ ಯೋಜನೆಯನ್ನಾಗಿ ಪರಿವರ್ತಿಸುವ ಪ್ರಯತ್ನವಾಗಿದೆ’ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪ್ರಸ್ತಾವಿತ ಮಸೂದೆಯಂತೆ ರಾಜ್ಯವಾರು ಬಜೆಟ್ ಹಂಚಿಕೆಯನ್ನು ಕೇಂದ್ರ ಸರ್ಕಾರವೇ ನಿಗದಿಪಡಿಸಲಿದ್ದು, ಹೆಚ್ಚುವರಿ ವೆಚ್ಚದ ಹೊರೆ ರಾಜ್ಯ ಸರ್ಕಾರಗಳ ಮೇಲಿದೆ. ಪ್ರತಿ ರಾಜ್ಯದಲ್ಲಿ ಒದಗಿಸಬಹುದಾದ ಮಾನವ ದಿನಗಳ ಸಂಖ್ಯೆಗೆ ಮಿತಿಯನ್ನೂ ವಿಧಿಸಲಾಗಿದೆ. ಈಗಿರುವ ಬಜೆಟ್‌ನಲ್ಲೇ ಪ್ರತಿ ಕುಟುಂಬಕ್ಕೆ 50 ದಿನಗಳ ಕೆಲಸ ನೀಡಲು ವಿಫಲವಾಗಿರುವ ಕೇಂದ್ರ ಸರ್ಕಾರ, 125 ದಿನಗಳ ಉದ್ಯೋಗದ ಹುಸಿ ಭರವಸೆ ನೀಡುತ್ತಿದೆ’ ಎಂದು ಟೀಕಿಸಿದರು.

ಮನರೇಗಾದಲ್ಲಿ ಕೇಂದ್ರ–ರಾಜ್ಯ ಬಜೆಟ್ ಹಂಚಿಕೆ 90:10 ಇದ್ದರೆ, ಹೊಸ ಮಸೂದೆಯಲ್ಲಿ ಅದನ್ನು 60:40ಕ್ಕೆ ಇಳಿಸಲಾಗಿದೆ. ಕೃಷಿ ಚಟುವಟಿಕೆ ಸಮಯದಲ್ಲಿ 60 ದಿನಗಳ ಕಾಲ ಯೋಜನೆಯನ್ನು ಸ್ಥಗಿತಗೊಳಿಸುವುದರಿಂದ ಮಹಿಳೆಯರು, ಭೂಹೀನರು ಮತ್ತು ಅಂಚಿನ ಸಮುದಾಯಗಳು ಉದ್ಯೋಗ ಹಕ್ಕಿನಿಂದ ವಂಚಿತರಾಗುತ್ತಾರೆ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸಾವೂರ ಗ್ರಾಮಕ್ಕೆ ಹೊಸ ಶಾಲಾ ಕಟ್ಟಡ ಮಂಜೂರು ಮಾಡುವಂತೆ ಮನವಿ

‘ಕೇಂದ್ರ ಸರ್ಕಾರವೇ ಕಾಮಗಾರಿಗಳನ್ನು ನಿಗದಿಪಡಿಸುವ ಮೂಲಕ ಗ್ರಾಮ ಸಭೆಗಳ ಅಧಿಕಾರವನ್ನು ಕುಂದಿಸಲಾಗಿದ್ದು, 73ನೇ ಸಂವಿಧಾನ ತಿದ್ದುಪಡಿಯ ವಿಕೇಂದ್ರಿಕೃತ ಆಡಳಿತ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂದು ಹೇಳಿದರು. ಜೊತೆಗೆ ಡಿಜಿಟಲ್ ಹಾಜರಾತಿ (ಎನ್‌ಎಂಎಂಎಸ್), ಆಧಾರ್ ಆಧಾರಿತ ಪಾವತಿ ವ್ಯವಸ್ಥೆ (ಎಬಿಪಿಎಸ್), ಬಯೋಮೆಟ್ರಿಕ್ ದೃಢೀಕರಣದಂತಹ ತಾಂತ್ರಿಕ ನಿಯಂತ್ರಣಗಳಿಂದ ಸಾವಿರಾರು ಕಾರ್ಮಿಕರನ್ನು ಕೆಲಸದಿಂದ ಹೊರಗಿಡಲಾಗುತ್ತಿದೆ’ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೇವಣಸಿದಪ್ಪ, ಸುನೀತಾ, ನೀಲಮ್ಮ ಮಹಾಗಾಂವ್, ಈರಮ್ಮ ಮರತೂರ್, ಪ್ರಕಾಶ ಆಳಂದ್, ವಿಜಯಲಕ್ಷ್ಮೀ ಕಂದಕೂರ್, ವಿಜಯಲಕ್ಷ್ಮೀ ಗುರಮಿಠಕಲ್, ನಿರ್ಮಲ, ಪವಿತ್ರ ಸೇರಿದಂತೆ ಅನೇಕರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...