ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ನಡೆದಿದೆ.
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಕೈಕೊಟ್ಟ ಕಾರಣಕ್ಕೆ ಕನಕಪುರ ಗ್ರಾಮದ ಮಲ್ಲೇಶಪ್ಪ ಕಲ್ಲಪ್ಪ (65) ವಿಷ ಕುಡಿದು ಸಾವಿಗೀಡಾಗಿದ್ದಾರೆ.
“ವಿಷ ಕುಡಿದು ಅಸ್ವಸ್ಥಗೊಂಡ ಅವರನ್ನು ಕೂಡಲೇ ಕಲಬುರಗಿಯ ಜಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ” ಎಂದು ಗ್ರಾಮದ ಮುಖಂಡ ಹಣಮಂತರಾವ್ ದೇಶಪಾಂಡೆ ಎಂಬುವವರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ; ₹9 ಕೋಟಿಗೂ ಅಧಿಕ ದಂಡ ಸಂಗ್ರಹ
ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಚಿಂಚೋಳಿ ಠಾಣೆಯ ಪೊಲೀಸರು ಆಸ್ಪತ್ರೆಗೆ ಧಾವಿಸಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಕೆಜಿಬಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಹಲವೆಡೆ ಅವರಿಗೆ ₹ 8 ಲಕ್ಷ ಸಾಲವಿದೆ ಎನ್ನಲಾಗಿದೆ.





