ಕಲಬುರಗಿ | ಹೆಚ್ಚಿನ ಲಾಭದ ಆಮಿಷವೊಡ್ಡಿ ಹೂಡಿಕೆ ಪ್ರಚೋದನೆ: ಜೆಸ್ಕಾಂ ನಿವೃತ್ತ ನೌಕರರಿಂದ ₹2.24 ಕೋಟಿ ವಂಚನೆ

Date:

ಹೆಚ್ಚಿನ ಹಣ ಗಳಿಸಬಹುದೆಂಬ ಆಮಿಷವೊಡ್ಡಿ ಆನ್‌ಲೈನ್ ಹೂಡಿಕೆಗೆ ಪ್ರಚೋದಿಸಿದ ಸೈಬರ್ ವಂಚಕರು, ಜೆಸ್ಕಾಂನ ನಿವೃತ್ತ ನೌಕರರೊಬ್ಬರಿಂದ ₹2.24 ಕೋಟಿ ಮೊತ್ತವನ್ನು ವಂಚಿಸಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ನಗರದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆ ಗಂಭೀರ ಆತಂಕ ಮೂಡಿಸಿದೆ.

ನಗರದ ಅಕ್ಕಮಹಾದೇವಿ ಕಾಲೊನಿಯ ನಿವಾಸಿ ಹಾಗೂ ಜೆಸ್ಕಾಂನ ನಿವೃತ್ತ ನೌಕರರಾದ 63 ವರ್ಷದ ದತ್ತಪ್ಪ ಸುರಪುರ ಅವರು ವಂಚನೆಗೆ ಒಳಗಾದವರು ಎಂದು ಪೊಲೀಸರು ತಿಳಿಸಿದ್ದಾರೆ.

ದೂರುದಾರರ ಮಾಹಿತಿ ಪ್ರಕಾರ, ಕಳೆದ ವರ್ಷದ ಜೂನ್ 11ರಂದು ಅವರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ರೀಲ್ಸ್ ವೀಕ್ಷಿಸುತ್ತಿರುವ ವೇಳೆ ‘ಆಟೋ ಟ್ರೇಡಿಂಗ್’ ಸಂಬಂಧಿಸಿದ ಆಕರ್ಷಕ ಜಾಹೀರಾತೊಂದು ಕಾಣಿಸಿಕೊಂಡಿದೆ. ಹೆಚ್ಚಿನ ಲಾಭದ ಭರವಸೆ ನೀಡಿದ ಆ ಜಾಹೀರಾತಿನಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ ಅವರು, ತಮ್ಮ ಹೆಸರು, ಮೊಬೈಲ್ ಸಂಖ್ಯೆ ಸೇರಿದಂತೆ ವೈಯಕ್ತಿಕ ಮಾಹಿತಿಯನ್ನು ನಮೂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಾಹಿತಿಯ ಆಧಾರದ ಮೇಲೆ ಕೆಲವೇ ಸಮಯದಲ್ಲಿ ಅರುಣ ಜೋಶಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ಸಂಪರ್ಕಿಸಿ, ‘ಕ್ವಾಂಟಾ ಪಲ್ಸ್’ ಎಂಬ ಆನ್‌ಲೈನ್ ಟ್ರೇಡಿಂಗ್ ವೇದಿಕೆಯಲ್ಲಿ ಹೂಡಿಕೆ ಮಾಡಿದರೆ ದಿನನಿತ್ಯ ಖಚಿತ ಲಾಭ ದೊರೆಯುತ್ತದೆ ಎಂದು ನಂಬಿಸುವ ಪ್ರಯತ್ನ ನಡೆಸಿದ್ದಾನೆ.

ಆರಂಭದಲ್ಲಿ ನಂಬಿಕೆ ಮೂಡಿಸುವ ಉದ್ದೇಶದಿಂದ ದತ್ತಪ್ಪ ಸುರಪುರ ಅವರಿಗೆ ₹12 ಸಾವಿರ ಹೂಡಿಕೆ ಮಾಡುವಂತೆ ಪ್ರೇರೇಪಿಸಲಾಗಿದೆ. ಹೂಡಿಕೆಯ ನಂತರ ದಿನನಿತ್ಯ ಆಟೋ ಟ್ರೇಡಿಂಗ್ ಲಾಭವಾಗಿ ₹500ರಿಂದ ₹1,000ವರೆಗೆ ಹಣವು ಅವರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದ್ದುದರಿಂದ, ಅವರು ವಂಚಕರ ಮಾತಿಗೆ ನಂಬಿಕೆ ಇಟ್ಟಿದ್ದಾರೆ.

ನಂತರ ಸೈಬರ್ ವಂಚಕರು ವಿವಿಧ ಹಂತಗಳಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡುವಂತೆ ಪ್ರಚೋದಿಸಿ, ಲಾಭ ಹೆಚ್ಚಾಗುತ್ತದೆ, ತೆರಿಗೆ ಮತ್ತು ಪ್ರೊಸೆಸಿಂಗ್ ಶುಲ್ಕ ಪಾವತಿಸಬೇಕಿದೆ ಎಂಬ ನೆಪ ಹೇಳಿ ಹಲವು ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ರೀತಿಯಾಗಿ ಕೆಲ ತಿಂಗಳುಗಳ ಅವಧಿಯಲ್ಲಿ ದತ್ತಪ್ಪ ಸುರಪುರರಿಂದ ಹಂತ ಹಂತವಾಗಿ ಒಟ್ಟು ₹2.24 ಕೋಟಿ ಮೊತ್ತವನ್ನು ವಂಚಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ನಸುಕಿನ ಜಾವ ಕಳ್ಳರ ಕೈಚಳಕ : ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ಲಾಭದ ಹಣವನ್ನು ವಾಪಸ್ ಪಡೆಯಲು ಯತ್ನಿಸಿದಾಗ ವಂಚಕರು ಸಂಪರ್ಕ ಕಡಿತಗೊಳಿಸಿದ್ದು, ಆ ನಂತರವೇ ತಮಗೆ ವಂಚನೆ ಆಗಿರುವುದು ತಿಳಿದುಬಂದಿದೆ. ತಕ್ಷಣವೇ ದತ್ತಪ್ಪ ಸುರಪುರ ಅವರು ಸಂಬಂಧಿಸಿದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸೈಬರ್ ಅಪರಾಧ ವಿಭಾಗದ ಮೂಲಕ ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬ್ಯಾಂಕ್ ಖಾತೆಗಳು, ಮೊಬೈಲ್ ಸಂಖ್ಯೆಗಳು ಹಾಗೂ ಆನ್‌ಲೈನ್ ವ್ಯವಹಾರಗಳ ವಿವರಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...