ಕಲಬುರಗಿ | ಕಾಮಗಾರಿಗಳಲ್ಲಿ ಅಕ್ರಮ; ಮೂವರು ಎಂಜಿನಿಯರ್‌ಗಳ ಅಮಾನತು

Date:

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಂಡ ರಸ್ತೆ ಮತ್ತು ಯುಜಿಡಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮತ್ತು ಇತರ ಇಬ್ಬರು ಸಹಾಯಕ ಎಂಜಿನಿಯರ್‌ಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿದೆ.

ತಾಲೂಕಿನ ಬಿಬ್ಬಳ್ಳಿ ಗ್ರಾಮದಲ್ಲಿ 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 1 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡ ರಸ್ತೆ ಮತ್ತು ಒಳಚರಂಡಿ ನಿರ್ಮಾಣ, ಬೆನಕನಳ್ಳಿ ಮತ್ತು ಉಡಗಿ ನಡುವಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪರಿಶೀಲನೆಯಲ್ಲಿವೆ. ಕಾಮಗಾರಿ ಪೂರ್ಣಗೊಳ್ಳದಿದ್ದರೂ ಗುತ್ತಿಗೆದಾರನಿಗೆ ಬಿಲ್ ಪಾವತಿಸಲಾಗಿದ್ದು, ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮೂವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರದ ವಿರುದ್ಧ ಅಣುಕು ಶವಯಾತ್ರೆ: ಜೆಡಿಎಸ್ ಜಿಲ್ಲಾಧ್ಯಕ್ಷ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇಡಂ ವಿಭಾಗದ ಪೂರ್ವ ವಿಭಾಗದ ಇಇ ಮೋನಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹನುಮಪ್ಪ ಆದವಾನಿ ಮತ್ತು ಕಿರಿಯ ಎಂಜಿನಿಯರ್ ಮಿರಾಜುದ್ದೀನ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ವಿಚಾರಣೆ ನಡೆಸಿದ್ದರು. ಮೂವರೂ ತಪ್ಪಿತಸ್ಥರೆಂದು ಕಂಡುಬಂದಿದ್ದು, ವಿವರವಾದ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿತ್ತು. ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಮೂವರು ಎಂಜಿನಿಯರ್‌ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...