ಫೆ.21 ರಿಂದ 28 ರವರೆಗೆ ‘ಕಲಬುರಗಿ ನಾಟಕೋತ್ಸವ 26’

Date:

ಕಲಬುರಗಿ ಜಿಲ್ಲೆಯಲ್ಲಿ ಫೆಬ್ರುವರಿ 21 ರಿಂದ 28 ರವರೆಗೆ ‘ಕಲಬುರಗಿ ನಾಟಕೋತ್ಸವ 26’ ಅನ್ನು ಆಯೋಜನೆ ಮಾಡಲಾಗುತ್ತಿದೆ. ಭಾನುವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಾರ್ಯಕ್ರಮದ ಲೋಗೋ ಬಿಡುಗಡೆಗೊಳಿಸಿದರು.

ಬಳಿಕ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಾತನಾಡಿ, ʼರಂಗ ಚಟುವಟಿಕೆಗಳನ್ನು ಅಭಿವೃದ್ದಿಪಡಿಸಲು ಐದು ವರ್ಷಗಳ‌ ಕಾಲ ನಿರಂತರ ನಾಟಕೋತ್ಸವ ಆಯೋಜಿಸಲಾಗುತ್ತಿದೆ. ಅದರ ಮೊದಲ ಪ್ರಯತ್ನವಾಗಿ ನಾಟಕೋತ್ಸವ ಆಯೋಜಿಸಲಾಗುತ್ತಿದೆ.

ʼಕಲಬುರಗಿ ಜಿಲ್ಲೆ ಶರಣರ, ಸಂತರ, ಸೂಫಿಗಳ ನಾಡಾಗಿದ್ದು ನಾಟಕೋತ್ಸವ ಆಯೋಜನೆ ಮಾಡುವುದರಿಂದ ಅವರ ತತ್ವಗಳನ್ನು ನಾಟಕಗಳ ಮೂಲಕ ಪ್ರೇಕ್ಷಕರಿಗೆ ನುರಿತ ಹಾಗೂ ಪರಿಣಿತ ನಾಟಕ ತಂಡಗಳ ಹಾಗೂ ರಂಗಕರ್ಮಿಗಳ ಮೂಲಕ ತಲುಪಿಸುವ ಕ್ರಿಯೆ ಮುಂದಿನ ಐದು ವರ್ಷಗಳ ಕಾಲ ನಡೆಯಲಿದೆ. ಸದ್ಯಕ್ಕೆ ಈಗ ಏರ್ಪಡಿಸುತ್ತಿರುವ ನಾಟಕೋತ್ಸವವನ್ನು ರಂಗಶಂಕರದೊಂದಿಗೆ ಸಹಭಾಗಿತ್ವ ಇದ್ದು ಸಾರ್ವಜನಿಕರು ಮಕ್ಕಳೊಂದಿಗೆ ನಾಟಕಗಳನ್ನು ನೋಡುವ ಮೂಲಕ ಪ್ರೋತ್ಸಾಹಿಸಬೇಕುʼ ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಇಷ್ಟು ವರ್ಷಗಳ ಕಾಲ ನಗರದಲ್ಲಿ ರಂಗ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರಲಿಲ್ಲ. ಆದ್ದರಿಂದ ನಿರಂತರ ಚಟುವಟಿಕೆ ನಡೆಸುವ ಉದ್ದೇಶದಿಂದ ಐದು ವರ್ಷಗಳ ಕಾಲದ ಯೋಜನೆ ಹಾಕಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಸ್ಥಳೀಯ ಕಲಾವಿದರಿಗೆ, ರಂಗಕರ್ಮಿಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದುʼ ಎಂದರು.

ಇದನ್ನೂ ಓದಿ : ಬೀದರ್‌ | ಕನ್ನಡ ಸಾಹಿತ್ಯ ಪ್ರತಿಪಾದಿಸುವುದು ಸಮಾನತೆ, ಸೌಹಾರ್ದತೆ : ಬರಗೂರು ರಾಮಚಂದ್ರಪ್ಪ

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್‌, ಜಗದೇವ ಗುತ್ತೇದಾರ್‌, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಸೇರಿದಂತೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...