ಕಲಬುರಗಿ | ವರ್ಷಗಳೇ ಕಳೆದರು ಡಾಂಬರು ಕಾಣದ ಖಣದಾಳ ರಸ್ತೆ

Date:

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಖಣದಾಳ ಗ್ರಾಮದ ಮುಖ್ಯರಸ್ತೆ ಗುಂಡಿಗಳಿಂದ ತುಂಬಿಹೋಗಿದೆ. ರಸ್ತೆಯ ಇಕ್ಕೆಲಗಳು ಕಿತ್ತುಹೋಗಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ. ವಾಹನ ಸವಾರರು ರಸ್ತೆಯಲ್ಲಿ ವಾಹನ ಚಲಾಯಿಸಲಾಗದೆ ಹೈರಾಣಾಗಿದ್ದಾರೆ. ಆದರೂ, ರಸ್ತೆಯ ದುರಸ್ತಿ ಮಾತ್ರ ಮರೀಚಿಕೆಯಾಗಿದೆ.

ಖಣದಾಳ, ಇಟಗಿ, ಮರತುರು ಹಾಗೂ ಶಹಾಬಾದ್‌ಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಇದಾಗಿದೆ. ಆದರೆ, ರಸ್ತೆ ಹಲವು ವರ್ಷಗಳಿಂದ ಡಾಂಬರಿಕಣವೇ ಕಂಡಿಲ್ಲ. ರಸ್ತೆ ಭಾರೀ ಗುಂಡಿಗಳಿಂದ ಕೂಡಿದ್ದು, ಸಂಚಾರ ನರಕಯಾತನೆಯಾಗಿದೆ. ವಾಹನ ಸವಾರರು ಗುಂಡಿಗಳಿಂದ ತಪ್ಪಿಸುವ ಯತ್ನದಲ್ಲಿ ಅಪಘಾತಕ್ಕೀಡಾಗಿರುವ ಹಲವಾರು ಘಟನೆಗಳು ನಡೆದಿವೆ. ರಸ್ತೆ ಸರಿಯಿಲ್ಲದ ಕಾರಣ ಬಸ್ ಸಂಚಾರವು ಕಡಿಮೆ ಆಗಿವೆ. ಬಸ್‌ ಇಲ್ಲದೆ, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ರಸ್ತೆ ಸಮಸ್ಯೆಯ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಖಣದಾಳ ಗ್ರಾಮದ ನಿವಾಸಿ ಶಾಂತಾಬಾಯಿ, “ನಮ್ಮ ಊರಿನ ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಒಂದು ವಾರದ ಹಿಂದೆ ನನ್ನ ಮಗ ಇದೆ ರಸ್ತೆಯ ಗುಂಡಿಯಲ್ಲಿ ಬಿದು ಗಾಯ ಮಾಡಿಕೊಂಡಿದ್ದಾನೆ. ಆದಷ್ಟು ಬೇಗ ರಸ್ತೆ ಸರಿಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 01 03 at 9.17.49 PM 1

ಮತ್ತೋರ್ವ ನಿವಾಸಿ ಕವಿತಾ ಮಾತನಾಡಿ, “ಗ್ರಾಮದಿಂದ ಅನೇಕ ಮಕ್ಕಳು ಶಾಲೆ ಕಾಲೇಜಿಗೆ ಬಸ್‌, ಬೈಕ್, ಆಟೋದಲ್ಲಿ ಹೋಗುತ್ತಾರೆ. ಹದಗೆಟ್ಟಿರುವ ರಸ್ತೆಯಿಂದ ಏನಾದರು ಅನಾಹುತ ಸಂಭವಿಸುವ ಮೊದಲೇ ರಸ್ತೆ ದುರಸ್ತಿ ಮಾಡಬೇಕು” ಎಂದು ಅಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: 6,195 ಶಾಲಾ ಶೌಚಾಲಯ ನಿರ್ಮಾಣ ಗುರಿ; 2,367 ಶೌಚಾಲಯ ಪೂರ್ಣ: ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮದ ನಿವಾಸಿ ಸೂರ್ಯಕಾಂತ ಮಾತನಾಡಿ, “ಚುನಾವಣೆ ಸಂದರ್ಭದಲ್ಲಿ ಓಟು ಕೇಳಲು ಗ್ರಾಮಕ್ಕೆ ಬರುವ ಶಾಸಕರು ಚುನಾವಣೆ ಮುಗಿದ ನಂತರ ನಮ್ಮ ಪರಿಸ್ಥಿತಿ ಬಗ್ಗೆಯಾಗಲಿ, ಗ್ರಾಮಗಳು ಅಭಿವೃದ್ಧಿ ಬಗ್ಗೆಯಾಗಲಿ ಯೋಚನೆ ಮಾಡುವುದಿಲ್ಲ. ಚುನಾವಣೆ ಬಂದಾಗ ರಸ್ತೆಗೆ ಪ್ಯಾಚ್ ವರ್ಕ್ ಮಾಡುತ್ತಾರೆ. ಅದು ಮಳೆಗಾಲದಲ್ಲಿ ಕಿತ್ತು ಹೋಗುತ್ತದೆ. ಸಂಪೂರ್ಣವಾಗಿ ರಸ್ತೆ ಡಾಂಬರಿಕರಣ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈದಿನ.ಕಾಮ್‌ ಜೊತೆ ಮಾತನಾಡಿದ ಪಿಡಿಒ ಪ್ರಭುದೇವ್ ರೆಡ್ಡಿ, “ಈ ಹಿಂದೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುವ ಓವರ್ ಲೋಡ್ ಲಾರಿಗಳಿಂದಾಗಿ ರಸ್ತೆ ಹದಗೆಟ್ಟಿದೆ. ಇತ್ತೀಚೆಗೆ ಅಕ್ರಮ ಮರಳು ಸಾಗಾಣಿಕೆ ಕಡಿವಾಣ ಬಿದ್ದಿದೆ. ರಸ್ತೆ ದುರಸ್ತಿ ಕುರಿತು ನಾನು ಶಾಸಕರ ಗಮನಕ್ಕೆ ತಂದಿದ್ದೇನೆ. ಮುಂದಿನ ಅನುದಾನದಲ್ಲಿ ರಸ್ತೆ ದುರಸ್ತಿ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...