ಹೊಸ ವರ್ಷದ ಗಿಫ್ಟ್ ನೀಡುವುದಾಗಿ ಪುಸಲಾಯಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕನೊಬ್ಬನನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ.
ಅಫಜಲಪುರದ ಪದವಿಪೂರ್ವ ಕಾಲೇಜೊಂದರಲ್ಲಿ ಅರ್ಥಶಾಸ್ತ್ರ ವಿಷಯ ಬೋಧಿಸುತ್ತಿದ್ದ ರಾಜಕುಮಾರ್ ಕುಂಬಾರ ಬಂಧಿತ ಆರೋಪಿಯಾಗಿದ್ದಾನೆ. ಜನವರಿ 1ರಂದು ವಿದ್ಯಾರ್ಥಿನಿಗೆ ಹೊಸ ವರ್ಷದ ಗಿಫ್ಟ್ ನೀಡುವುದಾಗಿ ಹೇಳಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಭಯ, ಭಕ್ತಿ ಮತ್ತು ಮೌಢ್ಯತೆಯಿಂದ ಮುಕ್ತವಾದ ಬೌದ್ಧ ಧರ್ಮವನ್ನು ಅಳವಡಿಸಿಕೊಳ್ಳಬೇಕು: ಡಾ. ಪುಟ್ಟಮಣಿ ದೇವಿದಾಸ್
ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.





