ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೇಡಂ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ ರೆಡ್ಡಿ (56) ಎಂದು ಗುರುತಿಸಲಾಗಿದೆ. ಅವರು ಸೇಡಂ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಕರ್ತವ್ಯದಲ್ಲಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ.
ತಕ್ಷಣವೇ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಡಿಪೋ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ ಜಿಲ್ಲಾ ಕೋರ್ಟ್‌ಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ತಪಾಸಣೆ
ಈ ಘಟನೆ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳಲ್ಲಿ ಆಘಾತ ಮೂಡಿಸಿದ್ದು, ಸಾರಿಗೆ ನೌಕರರು ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ತವ್ಯದಲ್ಲೇ ಚಾಲಕರೊಬ್ಬರು ಪ್ರಾಣ ಕಳೆದುಕೊಂಡಿರುವುದು ಸಾರಿಗೆ ವಲಯದಲ್ಲಿ ದುಃಖದ ವಾತಾವರಣವನ್ನು ಸೃಷ್ಟಿಸಿದೆ.





