ಕಲಬುರಗಿ | ಮದ್ಯ ನಿಷೇಧ ಆಂದೋಲನ; ಕಪ್ಪುಪಟ್ಟಿ ಧರಿಸಿ ಮಹಿಳೆಯರ ಮೌನ ಪ್ರತಿಭಟನೆ

Date:

ರಾಜ್ಯದಲ್ಲಿ ಸಂಪೂರ್ಣ ಮದ್ಯನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಹತ್ತು ವರ್ಷಗಳಿಂದ ಮಹಿಳಾ ನೇತೃತ್ವದಲ್ಲಿ ನಡೆಯುತ್ತಿರುವ ಮದ್ಯನಿಷೇಧ ಆಂದೋಲನದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ, “ಸರಾಯಿ ಬೇಡ ಶಿಕ್ಷಣ ಬೇಕು, ಬೀರು ಬೇಡ ನೀರು ಬೇಕು” ಎಂಬ ಘೋಷ ವಾಕ್ಯದೊಂದಿಗೆ ಸೋಮವಾರ 77ನೇ ಗಣರಾಜ್ಯೋತ್ಸವದಂದು ಕಲಬುರಗಿಯಲ್ಲಿ ಮಹಿಳೆಯರು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಪ್ರತಿಭಟನಾಕಾರರು, ಕಳೆದ ಸೆಪ್ಟೆಂಬರ್ 25, 2025ರಂದು ಬೆಂಗಳೂರಿನಲ್ಲಿ ನಡೆದ ಸತ್ಯಾಗ್ರಹದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 8,000ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿ ತಮ್ಮ ನ್ಯಾಯಸಮ್ಮತ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಟ್ಟಿದ್ದರು. ಆ ವೇಳೆ ಮುಖ್ಯಮಂತ್ರಿಗಳು ಮಂತ್ರಿಮಂಡಲ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ತಿಂಗಳೊಳಗೆ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೆ ಯಾವುದೇ ಸ್ಪಷ್ಟ ತೀರ್ಮಾನ ಅಥವಾ ಪ್ರತಿಕ್ರಿಯೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮದ್ಯಪಾನವು ಸಮಾಜದ ಆರೋಗ್ಯ, ಕುಟುಂಬಗಳ ನೆಮ್ಮದಿ ಹಾಗೂ ಮಹಿಳೆಯರ ಭದ್ರತೆಗೆ ಭಾರೀ ಧಕ್ಕೆಯನ್ನುಂಟುಮಾಡುತ್ತಿದೆ. ಆದರೂ ಸರ್ಕಾರವು ಸಮಾಜದ ಹಿತಕ್ಕಿಂತ ಮದ್ಯ ಮಾರಾಟದಿಂದ ಬರುವ ಆದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಅತ್ಯಂತ ವಿಷಾದನೀಯ ಎಂದು ಮಹಿಳೆಯರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1259393

ಪ್ರತಿಭಟನಾಕಾರರು ತಮ್ಮ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು, ಮದ್ಯ ಮಾರಾಟಕ್ಕೆ ಪರವಾನಿಗೆ ನೀಡುವ ವಿಚಾರದಲ್ಲಿ ಗ್ರಾಮಸಭೆಗಳಿಗೆ ನಿರ್ಣಯಾಧಿಕಾರ ನೀಡಬೇಕು ಎಂದು ಆಗ್ರಹಿಸಿದರು. ಹರಿಯಾಣ, ಮಹಾರಾಷ್ಟ್ರ, ರಾಜಸ್ಥಾನ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪಂಚಾಯತ್ ರಾಜ್ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ, ಗ್ರಾಮಸಭೆಯಲ್ಲಿ ಕನಿಷ್ಠ ಶೇಕಡಾ 20ರಷ್ಟು ಮಹಿಳೆಯರ ಒಪ್ಪಿಗೆ ಕಡ್ಡಾಯಗೊಳಿಸಬೇಕು ಎಂದರು. 2016ರ ತನಕ ಜಾರಿಯಲ್ಲಿದ್ದ ಈ ಅಂಶವನ್ನು ಮರುಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಇದೇ ವೇಳೆ, ಪರವಾನಗಿ ಪಡೆದ ಅಂಗಡಿಗಳ ಹೊರತಾಗಿ ಮನೆ ಮನೆಗಳಲ್ಲಿ, ಪಾನಷಾಪ್‌ಗಳು ಹಾಗೂ ಕಿರಾಣಿ ಅಂಗಡಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಯಲು ಪ್ರತಿ ಹಳ್ಳಿಯಲ್ಲೂ ಮಹಿಳಾ ಜಾಗೃತಿ ಸಮಿತಿಗಳನ್ನು ರಚಿಸಿ, ಅವರಿಗೆ ಅರೆ ನ್ಯಾಯಿಕ ಅಧಿಕಾರ ನೀಡಬೇಕು ಎಂದು ಆಗ್ರಹಿಸಿದರು.

ನಮ್ಮ ಹಕ್ಕೊತ್ತಾಯಗಳನ್ನು ತುರ್ತು ಹಾಗೂ ಗಂಭೀರವಾಗಿ ಪರಿಗಣಿಸಿ ಸರ್ಕಾರ ತಕ್ಷಣ ಜಾರಿಗೆ ಆದೇಶ ಹೊರಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಮಹಿಳೆಯರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಎಲ್ಲ ಪದಾಧಿಕಾರಿಗಳು ಮುಖಂಡರು, ಮಹಿಳೆಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...