ಕಲಬುರಗಿ | ಕೋಲಿ, ಕಬ್ಬಲಿಗ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Date:

ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹಾಗೂ ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸೋಮವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೋಲಿ ಮತ್ತು ಕಬ್ಬಲಿಗ ಸಮಾಜಗಳ ಮುಖಂಡರ ನೇತೃತ್ವದಲ್ಲಿ ಹಾವೇರಿಯ ಶಾಂತಬಿಷ್ಮ ಚೌಡಯ್ಯ ಸ್ವಾಮೀಜಿ ಧ್ವಜ ಪ್ರದರ್ಶನದ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು.

ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
959123

ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ‘1996ರಿಂದಲೇ ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಹಾಗೂ ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದೇವೆ ಎಂದು ತಿಳಿಸಿದರು. ಗಂಗಾಮತ ಹಾಗೂ ಅದರ ಉಪಜಾತಿಗಳ ಕುರಿತು ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಪ್ರಸ್ತಾವನೆ ಸಲ್ಲಿಸಲಾದರೂ, ಅದು ಪದೇಪದೇ ವಾಪಸ್ ಬರುತ್ತಿರುವುದು ನೋವಿನ ಸಂಗತಿ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ರಾಜ್ಯ ಸರ್ಕಾರವು ಮತ್ತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.

ಕೋಲಿ ಸಮಾಜದ ಮುಖಂಡ ಶಿವಕುಮಾರ್ ನಾಟೀಕಾರ ಮಾತನಾಡಿ, ‘ನಮ್ಮ ಹೋರಾಟ ಯಾವುದೇ ಸರ್ಕಾರ ಅಥವಾ ರಾಜಕೀಯ ಪಕ್ಷದ ವಿರುದ್ಧವಲ್ಲ. 1996ರಿಂದ ನಮ್ಮ ಪ್ರಸ್ತಾವನೆಗಳು ವಾಪಸ್ ಬರುತ್ತಿವೆ. ಅಹಿಂದ ಸರ್ಕಾರವೆಂದು ಕರೆಸಿಕೊಳ್ಳುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಕೇಂದ್ರಕ್ಕೆ ಶಿಫಾರಸು ಮಾಡುವಲ್ಲಿ ವಿಫಲವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಭಾವಿ ಸಚಿವರಾಗಿರುವುದರಿಂದ, ನಮ್ಮ ಬೇಡಿಕೆಯನ್ನು ಅವರೇ ಪೂರೈಸಬೇಕು’ ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೌಟುಂಬಿಕ ಕಲಹ : ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರತಿಭಟನೆಯಲ್ಲಿ ಹಾವೇರಿಯ ಶಾಂತಬಿಷ್ಮ ಚೌಡಯ್ಯ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಸಾಬಣ್ಣ ಜಮಾದಾರ್, ಶರಣಪ್ಪ ತಳವಾರ, ಶೋಭಾ ಬಾಣಿ, ವಿದ್ಯಾಧರ ಮಂಗಳೂರು, ದಿಗಂಬರ ಕರಜಗಿ, ಭೀಮರಾಯ ಜನಿವಾರ, ಸುರೇಶ್ ಹುಡಗಿ, ಲಕ್ಷ್ಮೀಪುತ್ರ ಜಮಾದಾರ್, ರವಿರಾಜ್ ಕೊರವಿ, ತಿಪ್ಪಣ್ಣ ರೆಡ್ಡಿ, ಪಿಡ್ಡಪ್ಪ ಜಾಲಗಾರ್, ಭಗವಂತರಾಯ ಬೆಣ್ಣೂರ, ರಾಕೇಶ್ ಜಮಾದಾರ್, ಮಹಾಂತೇಶ್ ಜಮಾದಾರ್ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕು, ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...