ಕಲಬುರಗಿ | ಡಾ.ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಅಡ್ಡಿ: ಶಾಸಕರ ವಿರುದ್ಧ ಬಹುಜನ ಸಮಾಜ ಪಕ್ಷ ಆಕ್ರೋಶ

Date:

ಸೇಡಂ ತಾಲೂಕಿನ ಭೊಂದೇಮಪಲ್ಲಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆ ವಿಚಾರದಲ್ಲಿ ಹೊಸ ವಿವಾದ ಉಂಟಾಗಿದ್ದು, ಗ್ರಾಮದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಮೂರ್ತಿ ಸ್ಥಾಪನೆಗೆ ಅಡ್ಡಿಪಡಿಸುತ್ತಿದ್ದಾರೆ. ಎಂದು ಬಹುಜನ ಸಮಾಜ ಪಕ್ಷದ ಮುಖಂಡ ರೇವಣಸಿದ್ದಪ್ಪ ಎಸ್ ಸಿಂಧೆ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿ ಅವರು ‘ಕೆಲವು ದಿನಗಳ ಹಿಂದೆ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಪಿಡಿಒ ಅವರ ಸಮ್ಮುಖದಲ್ಲಿ ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಸಂಬಂಧಿಸಿದಂತೆ ಜಿಪಿಎಸ್ ಫೋಟೋ ತೆಗೆದು ಗುದ್ದಲಿ ಪೂಜೆ ನೆರವೇರಿಸಲಾಗಿತ್ತು. ಆದರೆ ಈಗ ಮೂರ್ತಿ ಸ್ಥಾಪನೆ ಮಾಡಿದರೆ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಎಂಬ ಕಾರಣ ನೀಡಿ ಕೆಲವು ವ್ಯಕ್ತಿಗಳು ಅಧಿಕಾರಿಗಳಿಗೆ ಹಾಗೂ ಸೇಡಂ ಶಾಸಕರಿಗೆ ಮನವಿ ಸಲ್ಲಿಸಿ ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೇಡಂ ಶಾಸಕರು ರಸ್ತೆ ಮಧ್ಯದಲ್ಲಿ ಇರುವ ಅಂಬೇಡ್ಕರ್ ಮೂರ್ತಿ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಮುಂದುವರಿಸಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರೆಂದು ಗ್ರಾಮಸ್ಥರು ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

1583891

‘ಈ ವಿಷಯ ತಿಳಿದು ಬಹುಜನ ಸಮಾಜ ಪಕ್ಷದ ಸೇಡಂ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು ಭೊಂದೇಮಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, “ಸೇಡಂ ತಾಲೂಕಿನ ಮೇದಕ್, ಕೋನಪೂರ್, ದುಗ್ಗನೂರು, ಸುಲೇಪೇಟೆ ಸೇರಿದಂತೆ ಹಲವೆಡೆ ರಸ್ತೆ ಮಧ್ಯದಲ್ಲೇ ವಿವಿಧ ಮೂರ್ತಿಗಳು ಇದ್ದರೂ ಅವುಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿಲ್ಲ. ಆದರೆ ಭೊಂದೇಮಪಲ್ಲಿ ಗ್ರಾಮದ ಅಂಬೇಡ್ಕರ್ ಮೂರ್ತಿ ಮಾತ್ರ ಶಾಸಕರ ಕಣ್ಣಿಗೆ ಕಾಣುತ್ತಿರುವುದು ಏಕೆ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಿಜವಾಗಿಯೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಗೌರವ ಇದ್ದರೆ ಸ್ಥಗಿತಗೊಂಡಿರುವ ಮೂರ್ತಿ ಕಾಮಗಾರಿಯನ್ನು ಕೂಡಲೇ ಪುನರಾರಂಭ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸೇಡಂ ತಾಲೂಕಿನ ದಲಿತ ಸಮುದಾಯದವರು ಭೊಂದೇಮಪಲ್ಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಹೋರಾಟ ಆರಂಭಿಸಲಾಗುತ್ತದೆ,’ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮಹಿಳೆಯರ ಮತ್ತು ಮಕ್ಕಳ ಸಮಸ್ಯೆಗಳ ಪರಿಹಾರಕ್ಕೆ ಬಲಿಷ್ಠ ಮಹಿಳಾ ಆಂದೋಲನ ಅಗತ್ಯ: ಗುಂಡಮ್ಮ ಮಡಿವಾಳ್

ಈ ಸಂದರ್ಭದಲ್ಲಿ ಭೀಮ ಮುಧೋಳ, ವಿಶ್ವನಾಥ ಉಡಗಿ, ಜಗನ್ನಾಥ ಇಮಾಡಪೂರ್, ಲಾಲಪ್ಪ, ವೆಂಕಟಪ್ಪ, ನರಸಿಂಹ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...