ಕಲಬುರಗಿ | ಪದವಿ ಪೂರ್ವ ಇಲಾಖೆಯ ನಿಯಂತ್ರಣ ವರ್ಗಾವಣೆ ವಿರೋಧ: ಆದೇಶ ಹಿಂಪಡೆಯುವಂತೆ ಉಪನ್ಯಾಸಕರ ಪ್ರತಿಭಟನೆ

Date:

ಪದವಿ ಪೂರ್ವ ಇಲಾಖೆಯ ಆಡಳಿತ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಪ್ರಸ್ತಾಪಕ್ಕೆ ವಿರೋಧಿಸಿ, ಸರ್ಕಾರದ ಪ್ರಸ್ತಾಪಿತ ಕಡತ ಸಂಖ್ಯೆ ಇಪಿ 10 ಡಿಜಿಡಿ 2026 ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ಬೆಂಗಳೂರು), ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಬೋಧಕೇತರ ಸಿಬ್ಬಂದಿಗಳ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಬಳಿಕ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳುಂಡಗಿ ಮಾತನಾಡಿ, ‘ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾಪಿತ ಆದೇಶದಂತೆ ಪದವಿ ಪೂರ್ವ ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸ್ವಾಯತ್ತತೆ, ಸಂಸ್ಥಾತ್ಮಕ ಅಸ್ತಿತ್ವ ಹಾಗೂ ಈಗಿರುವ ಆಡಳಿತಾತ್ಮಕ ವ್ಯವಸ್ಥೆಗೆ ಗಂಭೀರ ಧಕ್ಕೆಯಾಗುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1585717

‘ಪದವಿ ಪೂರ್ವ ಶಿಕ್ಷಣವು ಸ್ವತಂತ್ರ ಆಡಳಿತ ವ್ಯವಸ್ಥೆಯಡಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅದನ್ನು ಜಿಲ್ಲಾ ಪಂಚಾಯತ್ ಆಡಳಿತದ ಅಧೀನಕ್ಕೆ ತರುವ ಪ್ರಯತ್ನವು ಶಿಕ್ಷಣ ವ್ಯವಸ್ಥೆಯ ಸುಗಮ ಕಾರ್ಯಾಚರಣೆಗೆ ಅಡಚಣೆ ಉಂಟುಮಾಡಬಹುದು. ಇದರಿಂದ ಪದವಿ ಪೂರ್ವ ಕಾಲೇಜುಗಳ ಆಡಳಿತ ವ್ಯವಸ್ಥೆ ದುರ್ಬಲವಾಗುವ ಭೀತಿ ಎದುರಾಗಿದೆ. ಆದ್ದರಿಂದ ಸರ್ಕಾರ ಈ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು’ ಎಂದು ಅವರು ಒತ್ತಾಯಿಸಿದರು.

‘ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ ಅವರು, ಸರ್ಕಾರ ಆದೇಶವನ್ನು ಹಿಂಪಡೆಯದಿದ್ದರೆ ಮುಂದಿನ ದ್ವಿತೀಯ ಪಿಯುಸಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕರಿಸುವಂತಹ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಾಗಿ ಸರ್ಕಾರದ ಪ್ರಸ್ತಾಪಿತ ಕಡತ ಸಂಖ್ಯೆ ಇಪಿ 10 ಡಿಜಿಡಿ 2026 (EP 10 DGD 2026) ಅನ್ನು ತಕ್ಷಣ ಹಿಂಪಡೆಯಬೇಕು. ಜೊತೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನಂತೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಯಿಸುಬೇಕು’ ಎಂಬ ಒತ್ತಾಯಿಸಿದರು.

1585714

‘ಇದಲ್ಲದೆ, ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಇರುವ 320:1 ವಿದ್ಯಾರ್ಥಿ, ಉಪನ್ಯಾಸಕರ ಅನುಪಾತವನ್ನು ಎನ್‌ಸಿಇಆರ್‌ಟಿ ಮಾರ್ಗಸೂಚಿಗಳನ್ವಯ ಮರುನಿಗದಿಪಡಿಸಬೇಕು’ ಎಂದು ಸಂಘಟನೆಗಳು ಒತ್ತಾಯಿಸಿವೆ.

‘ಕಳೆದ ಮೂರು ವರ್ಷಗಳಿಂದ ಪರಿಷ್ಕರಿಸದಿರುವ ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಭತ್ಯೆ ಹಾಗೂ ಪರೀಕ್ಷಾ ಸಂಭಾವನೆಯನ್ನು ತಕ್ಷಣ ಪರಿಷ್ಕರಿಸಿ, ಬಾಕಿ ಇರುವ ಸಂಭಾವನೆಗಳನ್ನು ಕೂಡಲೇ ಪಾವತಿಸಬೇಕು. ಖಾಸಗಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಪ್ರಥಮ ಆದ್ಯತೆಯಾಗಿ ಈ ಸಂಭಾವನೆಗಳನ್ನು ವಿತರಿಸಬೇಕು’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ಕಾರ್ಯಭಾರ ಕೊರತೆ ಇರುವ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಸೇವೆಯಿಂದ ವಿಮುಕ್ತಿಗೊಳಿಸುವ ಆದೇಶವನ್ನು ಹಿಂಪಡೆದು, ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರ ನೀಡಲು ಸರ್ಕಾರ ಅನುಮೋದನೆ ನೀಡಬೇಕು’ ಎಂದು ಸಂಘಟಕರು ಆಗ್ರಹಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಹಾಗೂ ಪದೋನ್ನತಿ ಹೊಂದಿದ ಪ್ರಾಂಶುಪಾಲರ ಸ್ಥಳ ನಿಯುಕ್ತಿಯ ಸಂದರ್ಭದಲ್ಲಿ ಎಲ್ಲಾ ಖಾಲಿ ಹುದ್ದೆಗಳನ್ನು ಯಾವುದೇ ನಿರ್ಬಂಧವಿಲ್ಲದೆ ಆಯ್ಕೆ ಮಾಡಲು ಅವಕಾಶ ನೀಡಬೇಕು ಎಂದು ಕೂಡ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದನ್ನು ಓದಿದ್ದೀರಾ ಕಲಬುರಗಿ | ಆಂಬುಲೆನ್ಸ್ ಅಪಘಾತ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ನರಸಪ್ಪ ರಂಗೋಲಿ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಶಿವಾನಂದ ಖಜೂರಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಬೋನಾಳ, ಬೋಧಕೇತರ ಸಿಬ್ಬಂದಿಗಳ ಸಂಘದ ಅಧ್ಯಕ್ಷ ನೆಸರ ಬೆಳಗಿ, ರಾಜ್ಯ ಪರಿಷತ್ ಸದಸ್ಯ ಧರ್ಮರಾಯ ಜವಳಿ, ನಿವೃತ್ತ ಜಂಟಿ ನಿರ್ದೇಶಕರಾದ ಶಿವಶರಣಪ್ಪ ಮುಳೆಗಾಂವ, ಸುಜಾತ ಬಿರಾದಾರ, ಭಾರತಿ ಕೊಭಾ, ಪ್ರಭಾತಿ ಪಾಟೀಲ, ದಶರಥ ರಾಠೋಡ, ಬಸವರಾಜ ಅಂಗಡಿ, ಶರಣಗೌಡ ಪಾಟೀಲ, ನಾಮದೇವ ಕಡಕೊಳ, ಭೀಮರಾಯ ಅರಕೇರಿ, ಬಿ.ಹೆಚ್‌. ನಿರಗುಡಿ, ಸಿ.ಚಿ. ಲಿಂಗಣ್ಯ, ಡಾ. ಪ್ರಹ್ಲಾದ ಬುರ್ಲಿ, ಉಮೇಶ ಅಷ್ಟಗಿ, ಮಹಾದೇವ ನಲಕಂಠ, ಜಯಶ್ರೀ ಪಾಟೀಲ, ಸವಿತಾ ನಾಸಿ, ಮಂಜುಳಾ, ಲಿಲಾವತಿ ನಾಗಶೆಟ್ಟಿ, ಸುವರ್ಣ ಬಿರಾದಾರ, ಜಮುನಾ ಟಿಳೆ, ನೀಲಮ್ಮ ಪಾಟೀಲ, ಶಾಂತಾ ಮಾಲಿ ಪಾಟೀಲ, ಸವಿತಾ ನಾಟೀಕಾರ, ಬಲರಾಮ ಚವ್ಹಾಣ, ಶಿವಶರಣಪ್ಪ ತಮ್ಮಾಗೊಳ, ತುಳಜಾ ರಾಮ್ಪರ, ನಾಗರತ್ನ ಇಂಡಿ, ರೇವಮ್ಮ ಸನ್ನತಿ, ಸಂತೋಷ್ ಪಾಂಚಳ್, ಹಮೀದಲಿ, ಜಟ್ಟಿಂಗ್ ರಾಯ್ ಶಾಕಾಪುರ್, ಅಂಬಾದಾಸ್ ಜಾಧವ್, ದೀಕ್ಷಿತ್, ಮಲ್ಲಿನಾಥ್,ವಿಠಲರಾವ್ ಬಾವಿಮನಿ, ಸುರಚಂದ ಗಾಂಧಿ, ಸುನಿಲ್ ರಾಥೋಡ್, ರಂಗಸ್ವಾಮಿ, ಕಾಶಿನಾಥ್ ಮುಖರ್ಜಿ, ಸುಮಂಗಲ ನಾಟಿಕರ್ ಸೇರಿದಂತೆ ಅನೇಕ ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...