ಕಲಬುರಗಿ ಜಿಲ್ಲೆಯ ಕಾರ್ಮಿಕ ಕಾಯ್ದೆಗಳಡಿ ನೋಂದಾಯಿತ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಅವಧಿಯಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡುವುದು ಕಡ್ಡಾಯವಾಗಿದೆ ಎಂದು ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ.
18 ರಿಂದ 52 ವರ್ಷದ ವಯೋಮಿತಿಯೊಳಗಿನ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ಮಹಿಳಾ ನೌಕರರಿಗೆ ವರ್ಷಕ್ಕೆ ಒಟ್ಟು 12 ದಿನಗಳ ವೇತನ ಸಹಿತ ಋತುಚಕ್ರ ರಜೆ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ರಜೆಯನ್ನು ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರದ ಅವಧಿಯಲ್ಲಿಯೇ ಬಳಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ನೇಣು ಬಿಗಿದುಕೊಂಡು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ
ಈ ರಜೆಗೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸುವ ಅಗತ್ಯವಿಲ್ಲ. ಸರ್ಕಾರದ ಆದೇಶವನ್ನು ಜಿಲ್ಲೆಯಲ್ಲಿನ ಎಲ್ಲ ಉದ್ಯೋಗದಾತರು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಉಪ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.





