ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

Date:

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಸೊ ವಿಶೇಷ) 20 ವರ್ಷ ಜೈಲು ಹಾಗೂ ₹1.50 ಲಕ್ಷ ದಂಡ ವಿಧಿಸಿ ಆದೇಶಿಸಿದೆ.

ಆಳಂದ ತಾಲ್ಲೂಕಿನ ಗ್ರಾಮವೊಂದರ ಟ್ರ್ಯಾಕ್ಟರ್ ಚಾಲಕ ರಿಯಾಜ್ ಬಾಗವಾನ (23) ಶಿಕ್ಷೆಗೆ ಒಳಗಾದ ಅಪರಾಧಿ. ಅಪರಾಧಿಯು 2025ರ ಜನವರಿ ತಿಂಗಳಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ್ದ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ್ದ ಆಳಂದ ಆಗಿನ ಡಿವೈಎಸ್ಪಿ ಗೋಪಿ ಬಿ.ಆರ್. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ಪೋಕ್ಸ್ ವಿಶೇಷ) ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜಿ. ಅವರು, ಅಪರಾಧಿಗೆ ಪೋಕ್ಕೂ ಕಾಯ್ದೆಯಡಿ 20 ವರ್ಷ ಜೈಲು ಹಾಗೂ ₹1 ಲಕ್ಷ ದಂಡ ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ 3 ವರ್ಷ ಜೈಲು, ₹25 ಸಾವಿರ ದಂಡ, ಬಿಎನ್‌ಎಸ್ ಕಾಯ್ದೆಯಡಿ 2 ವರ್ಷ ಜೈಲು ಹಾಗೂ ₹25 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ನೊಂದ ಬಾಲಕಿಗೆ ಕಾನೂನು ಪ್ರಾಧಿಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದರು.

ಇದನ್ನೂ ಓದಿ : ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...