ಕಲಬುರಗಿ | ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗೆ ₹1.50 ಲಕ್ಷ ದಂಡ!

Date:

ಪ್ರಕರಣವೊಂದರ ತನಿಖೆಗೆ ಆರೋಪಿಗಳು ಸಹಕರಿಸುತ್ತಿಲ್ಲವೆಂದು ಸುಳ್ಳು ನೆಪ ಹೇಳಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ವಂಚಿಸಿದ ಪೊಲೀಸ್ ಅಧಿಕಾರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ₹1.50 ಲಕ್ಷ ದಂಡ ವಿಧಿಸಿದೆ.

ಈ ಹಿಂದೆ ಬ್ರಹ್ಮಪುರ ಪೊಲೀಸ್ ಠಾಣೆಯ ಪಿಐ ಆಗಿದ್ದ ಹಾಗೂ ಪ್ರಸ್ತುತ ಡಿವೈಎಸ್‌ಪಿಯಾಗಿರುವ ಸೋಮಲಿಂಗ ಕಿರದಳ್ಳಿ ಅವರು ದಂಡಕ್ಕೆ ಗುರಿಯಾದ ಅಧಿಕಾರಿ. ದಂಡದ ಮೊತ್ತವನ್ನು ಪ್ರಕರಣದ ಮೂವರು ಆರೋಪಿಗಳಿಗೆ ತಲಾ ₹50 ಸಾವಿರದಂತೆ ಪರಿಹಾರ ರೂಪದಲ್ಲಿ ಪಾವತಿಸುವಂತೆ ನ್ಯಾಯಾಧೀಶ ಮಹಮ್ಮದ್ ಮುಜೀರ್ ಉಲ್ಲಾ ಅವರಿದ್ದ ಪೀಠ ಆದೇಶಿಸಿದೆ.

ಅಜಾದ್‌ಪುರ ರಸ್ತೆಯ ಅಹ್ಮದ್ ನಗರ ನಿವಾಸಿಗಳಾದ ಸಲ್ಲಾವುದ್ದೀನ್ ಶೇಖ್, ಶಬಾನಾ ಬೇಗಂ ಹಾಗೂ ಸರ್ವರ್ ಮತೀನ್ ವಿರುದ್ಧ 2024ರ ಡಿಸೆಂಬರ್ 19ರಂದು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ನ್ಯಾಯಾಲಯದಿಂದ ಜಾಮೀನು ಪಡೆದು ತನಿಖೆಗೆ ನಿಯಮಿತವಾಗಿ ಹಾಜರಾಗುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ತನಿಖಾಧಿಕಾರಿ ಸೋಮಲಿಂಗ ಕಿರದಳ್ಳಿ ಅವರು ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೇಳಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ದಾಖಲೆಗಳನ್ನು ಸಲ್ಲಿಸಿ ಆರೋಪಿಗಳು ತನಿಖೆಗೆ ಹಾಜರಾಗಿದ್ದುದನ್ನು ಸಾಬೀತುಪಡಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಕೆಕೆಆರ್‌ಟಿಸಿ ಬಸ್‌ಗೆ ಆಕಸ್ಮಿಕ ಬೆಂಕಿ; ಪ್ರಯಾಣಿಕರು ಪ್ರಣಾಪಾಯದಿಂದ ಬಚಾವ್

ಸುಳ್ಳು ಮಾಹಿತಿ ನೀಡಿ ನ್ಯಾಯಾಲಯವನ್ನು ದಾರಿಗೆಡಿಸಿದ್ದುದು ಸಾಬೀತಾದ ಹಿನ್ನೆಲೆಯಲ್ಲಿ ಅಧಿಕಾರಿಗೆ ದಂಡ ವಿಧಿಸಲಾಗಿದೆ. ಜೊತೆಗೆ ಈ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...