ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಗಲಾಟೆ

Date:

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗಂಭೀರ ಹೊಡೆದಾಟದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಕೈದಿ ಹಾಗೂ ಸ್ಥಳೀಯ ಕೈದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಮಾತಿನ ಚಕಮಕಿ ತೀವ್ರ ಗಲಾಟೆಗೆ ತಿರುಗಿದೆ.

ಬೆಂಗಳೂರು ಮೂಲದ ವೆಂಕಟರಮಣ ಎಂಬ ಕೈದಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪ ಕೇಳಿಬಂದಿದ್ದು, ಇದಕ್ಕೆ ಪ್ರತಿಯಾಗಿ ಸ್ಥಳೀಯ ಕೈದಿಗಳೂ ಅವಾಚ್ಯ ಪದಗಳಿಂದ ಉತ್ತರಿಸಿದ್ದಾರೆ. ಮಾತಿನ ಚಕಮಕಿ ಉಲ್ಬಣಗೊಂಡು ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ರೊಚ್ಚಿಗೆದ್ದ ಸ್ಥಳೀಯ ಕೈದಿಗಳು ವೆಂಕಟರಮಣನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಗಲಾಟೆಯ ವೇಳೆ ಜೈಲಿನೊಳಗಿದ್ದ ಟಿವಿಯನ್ನು ವೆಂಕಟರಮಣ ಒಡೆದು ಹಾಕಿರುವ ಮಾಹಿತಿ ತಿಳಿದು ಬಂದಿದೆ.

ವೆಂಕಟರಮಣನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಕ್ಷಾತ್ಮಕ ವರ್ಗಾವಣೆಯ ಮೂಲಕ ಕಳುಹಿಸಲಾಗಿತ್ತು. ಈ ಹಿಂದೆ ವೀಡಿಯೋ ಬಿಡುಗಡೆ ಪ್ರಕರಣದ ಹಿನ್ನೆಲೆಯಲ್ಲಿ ಅವನಿಗೆ ಪನಿಷ್‌ಮೆಂಟ್ ಟ್ರಾನ್ಸ್‌ಫರ್ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ನಂತರ ಜೈಲಿನೊಳಗೆ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮಾಹಿತಿ ತಿಳಿದ ತಕ್ಷಣ ಎಸಿಪಿ ಸೇರಿದಂತೆ ಫರಹತಾಬಾದ್ ಠಾಣೆಯ ಇನ್ಸ್‌ಪೆಕ್ಟರ್ ಹುಸೇನ್ ಭಾಷಾ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಸೈಕಲ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಕೆಲವು ದಿನಗಳ ಹಿಂದೆ ಕಾರಾಗೃಹಗಳ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ತೀವ್ರ ಶೋಧ ನಡೆಸಿ, ಅಕ್ರಮ ಹಾಗೂ ಅಹಿತಕರ ಚಟುವಟಿಕೆಗಳಿಗೆ ಅವಕಾಶ ನೀಡಬಾರದೆಂದು ಕಠಿಣ ಎಚ್ಚರಿಕೆ ನೀಡಿದ್ದರು. ಇಂತಹ ಎಚ್ಚರಿಕೆಯ ನಡುವೆಯೇ ಜೈಲಿನೊಳಗಿನ ಜೂಜಾಟ, ಮದ್ಯಪಾನ, ಧೂಮಪಾನಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್ ಆಗಿರುವ ಪ್ರಕರಣಗಳ ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಮತ್ತೊಂದು ಗಲಾಟೆ ಬೆಳಕಿಗೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...