ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 8 ವರ್ಷದ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬುಧವಾರ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ನಡೆದಿದೆ.
ಮೃತರು ಸಂಗಮೇಶ ಜಗನ್ನಾಥ್ ಬಾಮೈ (8) ಮಹಾಗಾಂವ್ ಕ್ರಾಸ್‌ನಲ್ಲಿರುವ ಮೌಂಟ್ ವೇವ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಅಪಘಾತದ ವೇಳೆ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸಿಪಿಐ ಶಿವಶಂಕರ್ ಸಾಹು ಹಾಗೂ ಕ್ರೈಂ ಪಿಎಸ್‌ಐ ವಿಶ್ವನಾಥ್ ಬಾಕಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಕೆಕೆಆರ್‌ಡಿಬಿ ಹಣಯಿಂದ ಸರ್ಕಾರಿ ಶಾಲೆ ಮುಚ್ಚುವ ಯತ್ನ; ಶಿಲ್ಪ ಬಿ ಕೆ ಆರೋಪ
ಈ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





