ಕಲಬುರಗಿ | 6 ಜನವರಿ 2026ರಂದು ಸ್ಲಂ ಜನಾಂದೋಲನ ಕರ್ನಾಟಕದಿಂದ ರಾಜ್ಯ ಸಮಾವೇಶ

Date:

‘ಸ್ಲಂ ಜನಾಂದೋಲನ ಕರ್ನಾಟಕದ 16ನೇ ಸಂಸ್ಥಾಪನಾ ದಿನದ ಅಂಗವಾಗಿ “ಕಾರ್ಪೋರೇಟ್ ಜಾತಿವಾದಿ ನವ-ನಗರಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸ್ಲಂ ಜನರ ಸವಾಲು” ವಿಷಯದ ರಾಜ್ಯ ಸಮಾವೇಶವನ್ನು ಜನವರಿ 6, 2026ರಂದು ಕಲಬುರಗಿಯ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸಂಚಾಲಕ ಎ ನರಸಿಂಹಮೂರ್ತಿ’ ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಸ್ಲಂ ನಿವಾಸಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಪ್ರಗತಿಪರ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸುದ್ದಿಗೋಷ್ಠಿಯ ಮೂಲಕ ಕರೆ ನೀಡಿದೆ.

ಮುಂದುವರೆದು ಮಾತನಾಡಿದ ಅವರು ‘ದೇಶ ಹಾಗೂ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಕಾರ್ಪೋರೇಟ್ ಆಧಾರಿತ ಅಭಿವೃದ್ಧಿ ಮಾದರಿಗಳು ಬಡ–ಶ್ರೀಮಂತರ ನಡುವಿನ ಅಂತರವನ್ನು ಹೆಚ್ಚಿಸುತ್ತಿದ್ದು, ಜಾತಿ ಹಾಗೂ ಧರ್ಮ ಆಧಾರಿತ ಅಸಮಾನತೆಗಳನ್ನು ತೀವ್ರಗೊಳಿಸುತ್ತಿವೆ’ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನಗರೀಕರಣ ಹಾಗೂ ಕಾರ್ಪೋರೇಟಿಕರಣದ ನೀತಿಗಳ ಪರಿಣಾಮ ಜನರು ಪ್ರಜೆಗಳಾಗಿ ಅಲ್ಲದೆ ಗ್ರಾಹಕರಾಗಿ ಪರಿವರ್ತಿತರಾಗಿದ್ದಾರೆ. ಇದರಿಂದ ಸಂವಿಧಾನದ ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಮಾಪಾಲು ಮೌಲ್ಯಗಳು ಹೀನಾಯ ಸ್ಥಿತಿಗೆ ತಲುಪಿವೆ. 2030ರ ಅಪಾಯವನ್ನು ತಪ್ಪಿಸಲು ಕಾರ್ಪೋರೇಟ್ ಜಾತಿವಾದಿ ನವ-ನಗರಗಳ ಅಭಿವೃದ್ಧಿಗೆ ವಿರೋಧವಾಗಿ ನಗರ ವಂಚಿತ ಸಮುದಾಯಗಳು ಸಂಘಟಿತರಾಗಿ ನಗರಗಳ ಮೇಲೆ ಹಕ್ಕು ಸ್ಥಾಪಿಸಬೇಕಾಗಿದೆ’ ಎಂದು ಅವರು ಹೇಳಿದರು.

863474

‘ನವ ಭಾರತ–ನವ ಕರ್ನಾಟಕ ವಿಜನ್ 2030’ ಹೆಸರಿನಲ್ಲಿ ಸರ್ಕಾರಗಳು ತಮ್ಮ ಜವಾಬ್ದಾರಿಗಳನ್ನು ಖಾಸಗಿ ವಲಯಕ್ಕೆ ಒಪ್ಪಿಸುತ್ತಿದ್ದು, ಇದರ ಪರಿಣಾಮವಾಗಿ ಬಡಜನರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಿದೆ. ಶಿಕ್ಷಣ, ಆರೋಗ್ಯ, ವಸತಿ, ಭೂಮಿ ಮತ್ತು ಸಾಮಾಜಿಕ ಭದ್ರತೆಗಾಗಿ ಹೋರಾಟ ಕಟ್ಟಿದಾಗ ಮಾತ್ರ ಸ್ಲಂ ಜನರು ಘನತೆಯ ಬದುಕು ಕಟ್ಟಿಕೊಳ್ಳಲು ಸಾಧ್ಯವೆಂದು’ ಅಭಿಪ್ರಾಯಪಟ್ಟರು.

ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಬೆಲೆ ಏರಿಕೆ, ನಿರುದ್ಯೋಗ, ದ್ವೇಷ ರಾಜಕಾರಣ ಹೆಚ್ಚಾಗಿದ್ದು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಹಾಗೂ ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಅಸಮಾನತೆಯನ್ನು ಗಟ್ಟಿಗೊಳಿಸುತ್ತಿವೆ. ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೋರೇಟ್ ಲಾಭಕ್ಕೆ ಅನುಕೂಲವಾಗುವ ನೀತಿಗಳು ಯುವಜನರ ಕನಸುಗಳನ್ನು ಭಗ್ನಗೊಳಿಸುತ್ತಿವೆ’ ಎಂದು ಅವರು ಟೀಕಿಸಿದರು.

‘ಸ್ಲಂ ನಿವಾಸಿಗಳನ್ನು ಅಕ್ರಮ ವಲಸಿಗರಂತೆ ನೋಡುವ ಮನೋಭಾವ ಬದಲಾಗಬೇಕು. ನಗರ ಭೂಮಿಯಲ್ಲಿ ಸ್ಲಂ ಜನರಿಗೆ ಪಾಲು ನೀಡಬೇಕು. ಪ್ರತಿ ಕುಟುಂಬಕ್ಕೆ ಕನಿಷ್ಠ 30×40 ಅಳತೆಯ ನಿವೇಶನ, ರಾಷ್ಟ್ರಮಟ್ಟದ ನಗರ ಲ್ಯಾಂಡ್ ಬ್ಯಾಂಕ್ ನೀತಿ ಜಾರಿ, ವಸತಿ ಹಕ್ಕು ಕಾಯ್ದೆ, ಉಚಿತ ಆರೋಗ್ಯ, ಸಮಾನ ಶಿಕ್ಷಣ, ಆಹಾರ ಭದ್ರತೆ, ಉದ್ಯೋಗ ಖಾತ್ರಿ ಹಾಗೂ ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ ಸೇರಿದಂತೆ’ ಹಲವು ಬೇಡಿಕೆಗಳನ್ನು ಅವರು ಮುಂದಿಟ್ಟರು.

ಇದನ್ನು ಓದಿದ್ದೀರಾ? ಕಲಬುರಗಿ | ಯುವಕರಲ್ಲಿ ನಾಯಕತ್ವದ ಗುಣ ಬೆಳೆಸುವ ಕ್ರೀಡೆ ಕ್ರಿಕೆಟ್: ಮಿಲಿಂದ ಸಾಗರ

ಬಳಿಕ ಸುದ್ದಿ ಗೋಷ್ಠಿಯಲ್ಲಿ 6 ಜನವರಿ 2026ರಂದು ಎಸ್ ಎಂ ಪಂಡಿತ್ ರಂಗಮಂದಿರ ಕಲಬುರಗಿನಲ್ಲಿ ನಡೆಯಲ್ಲಿರು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ಜನಾರ್ಧನ ಹಳ್ಳಿಬೆಂಚಿ, ಜಿಲ್ಲಾಧ್ಯಕ್ಷೆ ಗೌರಮ್ಮ ಮಾಕಾ, ಕಾರ್ಯದರ್ಶಿ ಶರಣು ಕಣ್ಣಿ, ಸಂಚಾಲಕಿ ರೇಣುಕಾ ಸರಡಗಿ, ಶರಣು ಹಂಗರಗಿ, ಸುನೀತಾ ಎಂ. ಕೊಲ್ಲೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...