ಕಲಬುರಗಿ | ಜ.27 ರಿಂದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಕ್ರಿಕೆಟ್; ಗುಲಬರ್ಗಾ ವಿವಿ ತಂಡ ಸಜ್ಜು

Date:

ಜನವರಿ 27 ರಿಂದ ಫೆಬ್ರವರಿ 3, 2026 ರವರೆಗೆ ಮೈಸೂರಿನ ಜೆ.ಎಸ್.ಎಸ್. ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಕ್ರಿಕೆಟ್ ಪುರುಷ ಪಂದ್ಯಾವಳಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳ ತಂಡ ಭಾಗವಹಿಸಲಿದೆ.

ಈ ಕುರಿತು ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದು, ‘ಪಂದ್ಯಾವಳಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕ್ರಿಕೆಟ್ ತಂಡವು ಸಂಪೂರ್ಣ ಸಿದ್ಧತೆಯೊಂದಿಗೆ ಮೈಸೂರಿಗೆ ತೆರಳಲಿದೆ’ ಎಂದು ತಿಳಿಸಿದ್ದಾರೆ.

ಪ್ರಕಟಣೆ ಪ್ರಕಾರ, ಚೈತನ್ಯ ಅವರು ಗುಲಬರ್ಗಾ ವಿಶ್ವವಿದ್ಯಾಲಯದ ಕ್ರಿಕೆಟ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ತಂಡದ ಸದಸ್ಯರಾಗಿ ಸುನೀಲ, ಇನಿತ್, ನಂದೀಶ, ಖಾದಿರ್, ಗಣೇಶ, ಅಭೀಷೇಕ ಎಸ್., ಓಂಕಾರ, ಸನಮಯಾ, ಶ್ರೀಕೃಷ್ಣ, ಮಹಮ್ಮದ್ ಅಬ್ದುಲ್ ಘಫೀರ್, ಮನೋಜ, ಮಹೇಶ, ಅಭೀಷೇಕ, ವಿವೇಕ ನಾಯಕ ಹಾಗೂ ಓಂ ರಂಜೋಲಕರ್ ಇವರು ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ತಂಡದ ತರಬೇತುದಾರ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂನ ಡಾ. ಜೆ.ಎಸ್. ಪಟ್ಟಣ್ಣಕರ್ ಕಾರ್ಯನಿರ್ವಹಿಸಲಿದ್ದಾರೆ. ಹಾಗೆಯೇ ತಂಡದ ವ್ಯವಸ್ಥಾಪಕರಾಗಿ ಗುಂಡೆಪಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೇಡಂನ ಡಾ. ಗಿರೀಶ ಜಂಗೆ ಇವರು ತಂಡದೊಂದಿಗೆ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಮದ್ಯ ನಿಷೇಧ ಆಂದೋಲನ; ಕಪ್ಪುಪಟ್ಟಿ ಧರಿಸಿ ಮಹಿಳೆಯರ ಮೌನ ಪ್ರತಿಭಟನೆ

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶಶಿಕಾಂತ ಎಸ್. ಉಡಿಕೇರಿ, ಕುಲಸಚಿವರಾದ ಪ್ರೊ. ರಮೇಶ್ ಲಂಡನಕರ್, ಡಾ. ಎನ್.ಜಿ. ಕಣ್ಣೂರ (ಕುಲಸಚಿವರು–ಮೌಲ್ಯಮಾಪನ), ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎಚ್.ಎಸ್. ಜಂಗೆ, ಸಂಯೋಜಕರು ಹಾಗೂ ಪ್ರಾಂಶುಪಾಲರು, ದೈಹಿಕ ಶಿಕ್ಷಣ ವಿಭಾಗದ ಶ್ರೀ ಪ್ರಕಾಶ ಆರ್ಯಳಕರ್, ಕ್ರೀಡಾಪಟು ಡಾ. ಚಂದ್ರಕಾಂತ ಬಿರಾದಾರ, ಶ್ರೀ ಪ್ರಶಾಂತಕುಮಾರ ಡಿ. ಹಾಗೂ ಶ್ರೀ ಅರುಣಕುಮಾರ ಎಚ್. ಇವರು ತಂಡದ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...