ಕಲಬುರಗಿ | ವಿದ್ಯಾರ್ಥಿಗಳೇ ಸಮಾಜದ ಭವಿಷ್ಯ, ಶೈಕ್ಷಣಿಕ ಸಾಧನೆ ದೇಶಕ್ಕೆ ದೊಡ್ಡ ಕೊಡುಗೆ: ಡಾ. ಅನೀಲ್ ಟೆಂಗಳಿ

Date:

ವಿದ್ಯಾರ್ಥಿಗಳೇ ಸಮಾಜದ ಭವಿಷ್ಯವಾಗಿದ್ದು, ಶೈಕ್ಷಣಿಕ ಸಾಧನೆ ದೇಶಕ್ಕೆ ನೀಡುವ ಬಹುದೊಡ್ಡ ಕೊಡುಗೆ ಎಂದು ಡಾ. ಅನೀಲ್ ಟೆಂಗಳಿ ಹೇಳಿದರು.
ನಗರದ ಸೇಂಟ್ ಮೇರಿ ಪಿ.ಯು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2025–26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಪಿಯುಸಿ ಹಂತದಲ್ಲಿ ವಯಸ್ಸಿನ ಕಾರಣದಿಂದ ವಿಚಲಿತವಾಗುವುದು ಸಹಜವಾದರೂ, ಇಂತಹ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ಗುರು ಆಧಾರಿತ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಗುರಿ ತ್ಯಾಗ ಮತ್ತು ಪರಿಶ್ರಮವನ್ನು ಬಯಸುತ್ತದೆ. ತಂದೆ-ತಾಯಿಗಳ ಕನಸು ನನಸು ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಜೊತೆಗೆ ಸಮಾಜದ ಸುಧಾರಣೆ ಹಾಗೂ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

1308477

ಹೆಚ್ಚು ಅಂಕ ಗಳಿಸುವುದಕ್ಕಿಂತಲೂ ಜೀವನದ ಮೌಲ್ಯಗಳು, ಸಾಮಾಜಿಕ ಮೌಲ್ಯಗಳು, ತಂದೆ-ತಾಯಿ, ಭೂಮಿ ಹಾಗೂ ದೇಶವನ್ನು ಪ್ರೀತಿಯಿಂದ ಕಾಣುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ವಿಷಯದ ಬಗ್ಗೆ ಆಳವಾದ ಜ್ಞಾನ ಮತ್ತು ಪಾಂಡಿತ್ಯ ಹೊಂದಿದಾಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ. ಶೈಕ್ಷಣಿಕ ಸಾಧನೆ ದೇಶಕ್ಕೆ ನೀಡುವ ಮಹತ್ವದ ಕೊಡುಗೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1300371

ಪ್ರೋ. ಸಂಜಯ್ ಮ್ಯಾಕಲ್ ಮಾತನಾಡಿ, ದೇಶದಲ್ಲಿ ಇಂಜಿನಿಯರ್‌ಗಳು, ವೈದ್ಯರು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ ನಿರುದ್ಯೋಗದ ಪ್ರತಿಯೊಬ್ಬರಲ್ಲೂ ಯಾವುದಾದರೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಅದೇ ದಾರಿಯಲ್ಲಿ ಸಾಗಿದರೆ ಗುರಿ ತಲುಪಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳನ್ನು ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಿ ಪ್ರತಿಭೆಗಳನ್ನು ಬೆಳೆಸುತ್ತಿರುವ ಸೇಂಟ್ ಮೇರಿ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.

1300351

ಈ ವೇಳೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜು, ಶಿಕ್ಷಕರು ಹಾಗೂ ತಮ್ಮ ಅನುಭವಗಳ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು.
ಫಾದರ್ ಸಂತೋಷ ಬಾಪು ಮಾತನಾಡಿ, ಜೀವನದಲ್ಲಿ ಶಿಸ್ತು ಅತ್ಯಂತ ಮುಖ್ಯ. ಶಿಸ್ತನ್ನು ಅಳವಡಿಸಿಕೊಂಡು ತಮ್ಮ ಪ್ರತಿಭೆಯನ್ನು ಗುರುತಿಸಿ ಅದರ ಅನುಸಾರವಾಗಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬೈಕ್ ಅಪಘಾತ : ಗಾಯಗೊಂಡ ಅಧ್ಯಾಪಕ ಸಾವು

ಫಾದರ್ ಆರನ್ ವಾಸ್, ರೋಸ್ ಆನ್ ಹಾಗೂ ಫಾದರ್ ಪ್ರವೀಣ್ ಜೋಸೆಫ್ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...